ವಿಜಯವಾಡ: ದೆಹಲಿಯಿಂದ ಹೊರಟಿದ್ದ ತಮಿಳುನಾಡು ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಬ್ ಇದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ರೈಲು ವಿಜಯವಾಡದ ಹೊರವಲಯದಲ್ಲಿ ಎರಡು ಗಂಟೆ ನಿಲ್ಲಿಸಿ, ಪರಿಶೀಲಿನೆ ನಡೆಸಿದ ಘಟನೆ ಬುಧವಾರ ನಡೆದಿದೆ.
ಬಾಂಬ್ ಬೆದರಿಕೆ ಕರೆ ಬಂದ ತಕ್ಷಣ ಇಂದು ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಕೃಷ್ಣ ಕಾಲುವೆ ಜಂಕ್ಷನ್ ಬಳಿ ರೈಲು ನಿಲ್ಲಿಸಿ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ, ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಅದೊಂದು ಹುಸಿ ಕರೆ ಎಂದು ಗುಂಟೂರು ಪೊಲೀಸ್ ಉಪ ಅಧೀಕ್ಷಕ ಅಜಯ್ ಪ್ರಸಾದ್ ಅವರು ತಿಳಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳದ ಐದು ತಂಡಗಳು ಸುಮಾರು ಎರಡು ಗಂಟೆಗಳ ಕಾಲ ಇಡೀ ರೈಲು ಮತ್ತು ಪ್ರಯಾಣಿಕರ ವಸ್ತುಗಳನ್ನು ಪರಿಶೀಲನೆ ನಡೆಸಿದರು. ಅಂತಿಮವಾಗಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ. ಪರಿಶೀಲನೆ ನಂತರ ರೈಲು ಪ್ರಯಾಣ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.