ಇಂದಿರಾ ಗಾಂಧಿ 34ನೇ ಪುಣ್ಯತಿಥಿ: ರಾಹುಲ್, ಸೋನಿಯಾ, ಮನಮೋಹನ್ ಸಿಂಗ್'ರಿಂದ ಪುಷ್ಪ ನಮನ
ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ 34ನೇ ಪುಣ್ಯತಿಥಿ ದಿನವಾದ ಬುಧವಾರ ಇಲ್ಲಿನ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗೌರವ ಸಲ್ಲಿಸಿದರು...
ನವದೆಹಲಿ: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ 34ನೇ ಪುಣ್ಯತಿಥಿ ದಿನವಾದ ಬುಧವಾರ ಇಲ್ಲಿನ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗೌರವ ಸಲ್ಲಿಸಿದರು.
ಶಕ್ತಿ ಸ್ಥಳದಲ್ಲಿರುವ ಮಾಜಿ ಪ್ರಧಾನಿ ಇಂದಿರಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಇಂದಿರಾ ಗಾಂಧಿಯವರ ಪುಣ್ಯತಿಥಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಅಜ್ಜಿಯನ್ನು ನೆನಪಿಸಿಕೊಳ್ಳುತ್ತಿದ್ದೇವೆ. ನನ್ನ ಅಜ್ಜಿ ಸಾಕಷ್ಟು ಹೇಳಿಕೊಟ್ಟಿದ್ದರು. ಅಂತ್ಯವಿಲ್ಲದ ಪ್ರೀತಿಯನ್ನು ನೀಡಿದ್ದರು. ಜನರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದರು. ಅವರೆಂದರೆ ನನಗೆ ಬಹಳ ಹೆಮ್ಮೆ ಎಂದು ಹೇಳಿಕೊಂಡಿದ್ದಾರೆ.
ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ಟ್ವೀಟ್ ಮಾಡಿದ್ದು, ಮಿ.ಇಂದಿರಾ ಗಾಂಧಿಯರ ಪುಣ್ಯತಿಥಿ ಹಿನ್ನಲೆಯಲ್ಲಿ ನಮನಗಳನ್ನು ಸಲ್ಲಿಸುತ್ತೇನೆಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.