ನ್ಯಾಯಾಲಯಕ್ಕೆ ಆಗಮಿಸಿದ ಎಂ ಜೆ ಅಕ್ಬರ್ 
ದೇಶ

ಮಿಟೂ ಆರೋಪ: ನ್ಯಾಯಾಲಯದಲ್ಲಿ ಮಾಜಿ ಸಚಿವ ಎಂ ಜೆ ಅಕ್ಬರ್ ಹೇಳಿಕೆ ದಾಖಲು

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸಿನ ವಿಚಾರಣೆಗೆ ...

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸಿನ ವಿಚಾರಣೆಗೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಮಾಜಿ ಕೇಂದ್ರ ಸಚಿವ ಎಂ ಜೆ ಅಕ್ಬರ್ ಬುಧವಾರ ದೆಹಲಿ ಕೋರ್ಟ್ ಮುಂದೆ ಹಾಜರಾದರು.

20 ವರ್ಷಗಳ ಹಿಂದೆ ಎಂ ಜೆ ಅಕ್ಬರ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪ್ರಿಯಾ ರಮಣಿ ಆರೋಪಿಸಿದ್ದರು.

ಈ ಕುರಿತು ಮಾನನಷ್ಟ ಮೊಕದ್ದಮೆ ಹಾಕಿದ್ದ ಎಂಜೆ ಅಕ್ಬರ್ ಇಂದು ದೆಹಲಿ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಮುಂದೆ ಹಾಜರಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅದನ್ನು ನ್ಯಾಯಾಧೀಶರು ದಾಖಲಿಸಿಕೊಂಡಿದ್ದಾರೆ.

ಭಾರತದಲ್ಲಿ ಮಿಟೂ ಚಳವಳಿ ತಾರಕಕ್ಕೇರಿದ್ದ ಸಂದರ್ಭದಲ್ಲಿ ತಮ್ಮ ವಿರುದ್ಧ ಆರೋಪ ಕೇಳಿಬಂದಾಗ ಎಂ ಜೆ ಅಕ್ಬರ್ ನೈಜೀರಿಯಾ ಪ್ರವಾಸದಲ್ಲಿದ್ದರು. ಅಕ್ಬರ್ ಅವರು ಪತ್ರಕರ್ತರಾಗಿದ್ದಾಗ ತಮ್ಮ ಮೇಲೆ ಕೂಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹಲವು ಪತ್ರಕರ್ತೆಯರು ಆರೋಪಿಸಿದ್ದರು.

ಅಕ್ಟೋಬರ್ 14ಕ್ಕೆ ನೈಜೀರಿಯಾದಿಂದ ಭಾರತಕ್ಕೆ ಆಗಮಿಸಿದ ಅಕ್ಬರ್, ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳು ಸುಳ್ಳು, ಕಟ್ಟುಕಥೆ ಮತ್ತು ತೀವ್ರ ಮಾನಹಾನಿಯುಂಟುಮಾಡುವಂತಹದ್ದು ಎಂದು ಹೇಳಿ ಇದರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ