ದೇಶ

ಶಬರಿಮಲೆ ತೀರ್ಪು ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Lingaraj Badiger
ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದ ತನ್ನ ತೀರ್ಪು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀ ಕೋರ್ಟ್ ಬುಧವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಹಾಗೂ ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಕೆಎಂ ಜೋಸೆಫ್ ಅವರನ್ನೊಳಗೊಂಡ ಪೀಠ ತುರ್ತು ವಿಚಾರಣೆಗೆ ನಿರಾಕರಿಸಿದೆ.
ಶಬರಿಮಲೆ ದೇವಸ್ಥಾನ ಕೇವಲ ನವೆಂಬರ್ 5 ಮತ್ತು 6 ರಂದು ಮಾತ್ರ ಭಕ್ತರಿಗೆ ತೆರೆದಿರುತ್ತದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 13ಕ್ಕೆ ನಿಗದಿಪಡಿಸಿರುವುದಾಗಿ ಕೋರ್ಟ್ ಅರ್ಜಿದಾರರ ಪರ ವಕೀಲರಿಗೆ ತಿಳಿಸಿದೆ.
ಸೆಪ್ಟೆಂಬರ್ 28ರಂದು ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ, ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಮಹತ್ವ ತೀರ್ಪು ನೀಡಿತ್ತು.
SCROLL FOR NEXT