ಒಂದೆಡೆ ಸರ್ದಾರ್ ಪಟೇಲ್ ಪ್ರತಿಮೆ ಉದ್ಘಾಟನೆ, ಮತ್ತೊಂದೆಡೆ ಅವರೇ ಸ್ಥಾಪಿಸಿದ್ದ ಸಂಸ್ಥೆಗಳ ನಾಶ: ರಾಹುಲ್ ಗಾಂಧಿ
ವಿಶ್ವದಲ್ಲೇ ಅತಿ ಎತ್ತರವಾದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾಜಿ ಉಪಪ್ರಧಾನಿ ಸರ್ದಾರ್ ಪಟೇಲ್ ಅವರ ಪ್ರತಿಮೆ ಉದ್ಘಾಟನೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿ: ವಿಶ್ವದಲ್ಲೇ ಅತಿ ಎತ್ತರವಾದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾಜಿ ಉಪಪ್ರಧಾನಿ ಸರ್ದಾರ್ ಪಟೇಲ್ ಅವರ ಪ್ರತಿಮೆ ಉದ್ಘಾಟನೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಒಂದೆಡೆ ಸರ್ದಾರ್ ಪಟೇಲ್ ಅವರ ಅತಿ ಎತ್ತರದ ಪ್ರತಿಮೆ ಉದ್ಘಾಟನೆ ಮಾಡುತ್ತದೆ ಮತ್ತೊಂದೆಡೆ ಅವರೇ ಬೆಳೆಸಿದ್ದ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಸರ್ದಾರ್ ಪಟೇಲ್ ಅವರ ಉಕ್ಕಿನ ಪ್ರತಿಮೆಯನ್ನು ಉದ್ಘಾಟನೆ ಮಾಡಿರುವ ಕೇಂದ್ರ ಸರ್ಕಾರ, ಒಂದು ಕಾಲದಲ್ಲಿ ಸರ್ದಾರ್ ಪಟೇಲ್ ಅವರೇ ಕಾಳಜಿ ವಹಿಸಿ ಬೆಳೆಸಿದ್ದ ಸಂಸ್ಥೆಗಳನ್ನು ನಾಶ ಮಾಡುತ್ತಿದೆ. ಭಾರತದ ಸಂಸ್ಥೆಗಳನ್ನು ವ್ಯವಸ್ಥಿತವಾಗಿ ನಾಶ ಮಾಡುತ್ತಿರುವುದು ಎಷ್ಟು ಸರಿ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.