ರಾಬರ್ಟ್ ವಾದ್ರಾ-ಭೂಪೀಂದರ್ ಸಿಂಗ್ ಹೂಡಾ 
ದೇಶ

ಸೋನಿಯಾ ಗಾಂಧಿ ಅಳಿಯ ವಾದ್ರಾಗೆ ಸಂಕಷ್ಟ, ಹರಿಯಾಣ ಮಾಜಿ ಸಿಎಂ ಹೂಡಾ, ವಾದ್ರಾ ವಿರುದ್ಧ ಎಫ್ಐಆರ್

ಗುರ್ಗಾಂವ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಸಿಂಗ್...

ಚಂಢಿಗಢ: ಗುರ್ಗಾಂವ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಸಿಂಗ್ ಹೂಡಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 
ರಾಬರ್ಟ್ ವಾದ್ರಾ, ಭೂಪೀಂದರ್ ಸಿಂಗ್ ಹೂಡಾ, ಸ್ಕೈಲೈಟ್ ಹಾಸ್ಪಿಟಾಲಿಟಿ ಪ್ರೈ. ಲೀ ಮತ್ತು ಡಿಎಲ್ಎಫ್ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮನೆಸಾರ್ ಉಪ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ತಿಳಿಸಿದ್ದಾರೆ. 
ನಹು ಮೂಲದ ಸುರೀಂದರ್ ಶರ್ಮಾ ಎಂಬುವರು ಭೂ ಹಗರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದು ಈ ಹಿನ್ನಲೆಯಲ್ಲಿ ಹರಿಯಾಣ ಪೊಲೀಸರು ಹೂಡಾ, ವಾದ್ರಾ ಸೇರಿದಂತೆ ಹಲವ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 
ಗುರ್ಗಾಂವ್ ನ ನಾಲ್ಕು ಗ್ರಾಮಗಳಲ್ಲಿ ವಸತಿ ಕಟ್ಟಡ ಮತ್ತು ವಾಣಿಜ್ಯ ಸಂಕೀರ್ಣಗಳ ಅಭಿವೃದ್ಧಿಗಾಗಿ ಹಿಂದಿನ ಹೂಡಾ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದ ಪರವಾನಗಿಗಳನ್ನು ತನಿಖೆ ಮಾಡಲು 2015ರಲ್ಲಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಆಯೋಗವನ್ನು ರಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT