ಶ್ರೀನಗರ; ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿವೆ ಎಂದು ಭಾನುವಾರ ತಿಳಿದುಬಂದಿದೆ.
ಲಡ್ಡಿ ಇಮಾಮ್'ಸಹಬ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸುತ್ತಿವೆ.
ಸೇನಾಪಡೆಗಳು ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.