ನನ್ನ ರಕ್ತಕ್ಕಾಗಿ ಕಾಂಗ್ರೆಸ್ ಹಪಹಪಿಸುತ್ತಿದೆ: ಮಧ್ಯಪ್ರದೇಶ ಸಿಎಂ 
ದೇಶ

ನನ್ನ ರಕ್ತಕ್ಕಾಗಿ ಕಾಂಗ್ರೆಸ್ ಹಪಹಪಿಸುತ್ತಿದೆ: ಮಧ್ಯಪ್ರದೇಶ ಸಿಎಂ

ಚುನಾವಣಾ ಕಣವಾಗಿರುವ ಮಧ್ಯಪ್ರದೇಶದಲ್ಲಿ ಆರೋಪ ಪ್ರತ್ಯಾರೋಪಗಳು ಪ್ರಾರಂಭವಾಗಿದ್ದು, ಕಾಂಗ್ರೆಸ್ ನನ್ನ ರಕ್ತಕ್ಕಾಗಿ ಹಪಹಪಿಸುತ್ತಿದೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.

ಚುನಾವಣಾ ಕಣವಾಗಿರುವ ಮಧ್ಯಪ್ರದೇಶದಲ್ಲಿ ಆರೋಪ ಪ್ರತ್ಯಾರೋಪಗಳು ಪ್ರಾರಂಭವಾಗಿದ್ದು, ಕಾಂಗ್ರೆಸ್ ನನ್ನ ರಕ್ತಕ್ಕಾಗಿ ಹಪಹಪಿಸುತ್ತಿದೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ. 
ಸೆ.೦2 ರಂದು ಜನ್ ಆಶೀರ್ವಾದ್ ಯಾತ್ರಾದಲ್ಲಿ ಭಾಗಿಯಾಗಿದ್ದ ವೇಳೆ ಸಿಧಿ ಜಿಲ್ಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಇದ್ದ ಕಾರಿನ ಮೇಲೆ ದಾಳಿ ನಡೆದಿತ್ತು. ಈ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ನನ್ನ ರಕ್ತಕ್ಕಾಗಿ ಹಪಹಪಿಸುತ್ತಿದೆ. ಒಂದು ವೇಳೆ ನಾನು ಮೃತಪಟ್ಟರೆ ಮುಂದಿನ ಜನ್ಮದಲ್ಲೂ ರಾಜ್ಯದ ಜನತೆಯ ಸೇವೆ ಮಾಡುವುದಕ್ಕಾಗಿ ಹುಟ್ಟುತ್ತೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕಾರಿನ ಮೇಲೆ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಶಂಕಿತ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. "ರಾಜಕೀಯ ಪಕ್ಷವೊಂದರ ಸಮಾವೇಶದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಮಧ್ಯಪ್ರದೇಶದ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ ಎಂದು ಶಿವರಾಜ್ ಸಿಂಗ್ ಚೌಹಾಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!