ದೇಶ

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ ವೇಳೆ ಯುವಕನ ಹತ್ಯೆ

Nagaraja AB

ಶ್ರೀನಗರ: ದಕ್ಷಿಣ  ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿಚಾರ್ಚ್ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ  ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಪುಲ್ವಾಮಾ ಜಿಲ್ಲೆಯ 12 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದು,  ಮುರಾನ ಹಳ್ಳಿಯಲ್ಲಿ ಗುಂಪಾಗಿ ಸೇರಿದ ಜನರು ಕಾರ್ಯಾಚರಣೆಗೆ ಅಡ್ಡಿಯನ್ನುಂಟುಮಾಡಿದ್ದಾರೆ.

ಕಾರ್ಯಾಚರಣೆಗೆ ಅಡ್ಡಿಪಡಿಸುತ್ತಿರುವ ಹಾಗೂ ಕಲ್ಲು ತೂರಾಟ ಮಾಡುತ್ತಿರುವವರನ್ನು ತಡೆಯಲು ಭದ್ರತಾ ಪಡೆಗಳು ಲಾಠಿ ಚಾರ್ಚ್ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಗೂಸ್ ಬಳಿಯೂ ಇಂತಹದ್ದೇ ಸಂಘರ್ಘ ನಡೆದಿದೆ.

ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವಿನ ಸಂಘರ್ಘದಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ. ಗುಂಡು ತಗುಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ .ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಶ್ರೀನಗರಕ್ಕೆ ಕೊಂಡೊಯ್ಯಲಾಯಿತು.

 ಸಂಘರ್ಷದ ವೇಳೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ವರದಿಯಾಗಿದೆ.

SCROLL FOR NEXT