ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸೊಪೋರ್ ನಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಸೊಪೋರ್ ನಲ್ಲಿರುವ ಡಿ/177ಬಿಎನ್ ಸಿಆರ್'ಪಿಎಫ್ ಯೋಧರ ಮೇಲೆ ಇಂದು ಬೆಳಿಗ್ಗೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಗಾಯಗೊಂಡ ಯೋಧರನ್ನು ಸ್ತಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.