ಸಂಗ್ರಹ ಚಿತ್ರ 
ದೇಶ

ಗುಟ್ಕಾ ಹಗರಣ: ತಮಿಳುನಾಡು ಆರೋಗ್ಯ ಸಚಿವ, ಪೊಲೀಸ್ ವರಿಷ್ಠಾಧಿಕಾರಿಗಳ ಮನೆ ಮೇಲೆ ಸಿಬಿಐ ದಾಳಿ

ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಟ್ಕಾ ಹಗರಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಗ್ಯ ಸಚಿವ ವಿಜಯ್ ಭಾಸ್ಕರ್, ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳ ಮನೆ ಸೇರಿದಂತೆ ಚೆನ್ನೈನ 40 ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಟ್ಕಾ ಹಗರಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಗ್ಯ ಸಚಿವ ವಿಜಯ್ ಭಾಸ್ಕರ್, ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳ ಮನೆ ಸೇರಿದಂತೆ ಚೆನ್ನೈನ 40 ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಈ 40 ಪ್ರದೇಶಗಳ ಪೈಕಿ ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್, ಚೆನ್ನೈ ಪೊಲೀಸ್ ಆಯುಕ್ತರು ಮತ್ತು ಇತರೆ ಸ್ಥಳೀಯ ರಾಜಕೀಯ ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಈ ಹಿಂದೆ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ತಂಬಾಕು, ಗುಟ್ಕಾ ಪದಾರ್ಥಗಳ ಮೇಲೆ ನಿಷೇಧ ಹೇರಿತ್ತು. ಆದರೆ ನಿಷೇಧದ ಹೊರತಾಗಿಯೂ ತಮಿಳುನಾಡಿನಲ್ಲಿ ಗುಟ್ಕಾ ಮತ್ತು ತಂಬಾಕು ವ್ಯಾಪಾರ ಎಗ್ಗಿಲ್ಲದೇ ಸಾಗಿತ್ತು. ಈ ಸಂಬಂಧ ತಮಿಳುನಾಡು ಆರೋಗ್ಯ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು ವ್ಯಾಪಾರಿಗಳಿಂದ ಸುಮಾರು 40 ಕೋಟಿ ರೂ. ಕಿಕ್ ಬ್ಯಾಕ್ ಪಡೆದು ಅನಧಿಕೃತವಾಗಿ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು.
ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಕಳೆದ ಏಪ್ರಿಲ್ ಸಿಬಿಐ ತನಿಖೆಗೆ ಆದೇಶಿಸಿತ್ತು. ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ತಮಿಳುನಾಡಿನ ಖ್ಯಾತ ತಂಬಾಕು ಉದ್ಯಮಿ ಮಾಧವ ರಾವ್ ಅವರಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿಗಳಿಗೆ ಡೈರಿಯೊಂದು ಲಭಿಸಿತ್ತು. ಈ ಡೈರಿಯಲ್ಲಿರುವ ಮಾಹಿತಿಯನ್ನಾಧರಿಸಿ ಇಂದು ಸಿಬಿಐ ಅಧಿಕಾರಿಗಳು ಮತ್ತೆ 40 ಕಡೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?