ಉಭಯ ದೇಶಗಳ ನಾಯಕರು 
ದೇಶ

2 + 2 ಮಾತುಕತೆ: ನಿರ್ಣಾಯಕ ರಕ್ಷಣಾ ಒಪ್ಪಂದಕ್ಕೆ ಭಾರತ, ಅಮೆರಿಕ ಸಹಿ

ಭಾರತ ಹಾಗೂ ಅಮೆರಿಕ ನಡುವಿನ ಬಹು ನಿರೀಕ್ಷಿತ 2 + 2 ಮೊದಲ ಮಾತುಕತೆಯಲ್ಲಿ, ಭಾರತೀಯ ಸೇನೆಗೆ ರಕ್ಷಣಾ...

ನವದೆಹಲಿ: ಭಾರತ ಹಾಗೂ ಅಮೆರಿಕ ನಡುವಿನ ಬಹು ನಿರೀಕ್ಷಿತ 2 + 2 ಮೊದಲ ಮಾತುಕತೆಯಲ್ಲಿ, ಭಾರತೀಯ ಸೇನೆಗೆ ರಕ್ಷಣಾ ತಂತ್ರಜ್ಞಾನ ಒದಗಿಸುವ ಮಹತ್ವದ ಒಪ್ಪಂದಕ್ಕೆ ಅಮೆರಿಕ ಗುರುವಾರ ಸಹಿ ಹಾಕಿದೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ, ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್  ಹಾಗೂ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನೊಳಗೊಂಡ 2 + 2 ಮಾತುಕತೆಯಲ್ಲಿ ಗಡಿ ಭೋಯತ್ಪಾದನೆ, ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಮತ್ತು ಎಚ್ 1ಬಿ ವೀಸಾ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.
ಮಾತುಕತೆ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, 2 + 2 ಮಾತುಕತೆ ತೃಪ್ತಿ ತಂದಿದೆ. ನಮ್ಮ ಮಾತುಕತೆ ಮತ್ತು ನಿರ್ಧಾರಗಳು ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ ಎಂದರು.
ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಫ್ ಅವರು ಉಭಯ ದೇಶಗಳ ಬಾಂಧವ್ಯಕ್ಕೆ ನಿರ್ದಿಷ್ಟತೆಯನ್ನು ನೀಡಿದ್ದಾರೆ. ಎರಡೂ ದೇಶಗಳ ನಡುವಿನ ಬಾಂಧವ್ಯ ನಿರ್ದಿಷ್ಟ ವಿಭಾಗಗಳಲ್ಲಿ ಮುಂಚೆಗಿಂತಲೂ ಉತ್ತಮವಾಗಿ ನಡೆಯುತ್ತಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಮೈಕ್ ಪಾಂಪಿಯೊ, ಭಾರತ - ಅಮೆರಿಕ ನಡುವಿನ ತಂತ್ರಜ್ಞಾನ ಪೂರೈಕೆ ಭದ್ರತಾ ಒಪ್ಪಂದ ಒಂದು ಮೈಲಿಗಲ್ಲು ಎಂದರು.
ಎರಡೂ ದೇಶಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಯುವ ಕಾರಣದಿಂದಾಗಿ ಒಂದಾಗಿವೆ. ಪ್ರತಿಯೊಬ್ಬರ ಹಕ್ಕನ್ನು ಗೌರವಿಸುವ ಹಾಗೂ ಸ್ವಾತಂತ್ರ್ಯ ನೀಡುವ ವಿಷಯವೇ ಭಾರತ ಹಾಗೂ ಅಮೆರಿಕದ ಪ್ರಮುಖ ಆದ್ಯತೆಗಳಾಗಿವೆ ಎಂದು ಪಾಂಪಿಯೊ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!