ಕೆಸಿಆರ್ 
ದೇಶ

ವಿಧಾನಸಭೆ ವಿಸರ್ಜನೆ ಬೆನ್ನಲ್ಲೇ 105 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕೆಸಿಆರ್

ವಿಧಾನಸಭೆ ವಿಸರ್ಜನೆ ಮಾಡಿದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್...

ಹೈದರಾಬಾದ್: ವಿಧಾನಸಭೆ ವಿಸರ್ಜನೆ ಮಾಡಿದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ 105 ಕ್ಷೇತ್ರಗಳ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಅಧ್ಯಕ್ಷ ಚಂದ್ರಶೇಖರ್ ರಾವ್ ಅವರು ಇಂದು ತೆಲಂಗಾಣ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, 105 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು.
ಕೇವಲ ಇಬ್ಬರು ಹಾಲಿ ಶಾಸಕರಿಗೆ ಮಾತ್ರ ಟಿಕೆಟ್ ನಿರಾಕರಿಸಲಾಗಿದ್ದು, ಉಳಿದ 14 ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಕೆಸಿಆರ್ ತಿಳಿಸಿದ್ದಾರೆ.
ಇದಕ್ಕು ಮುನ್ನ ಕೆಸಿಆರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆಯನ್ನು ವಿಸರ್ಜಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ಸಂಪುಟದ ನಿರ್ಣಯವನ್ನು ರಾಜ್ಯಪಾಲ ಇಎಸ್ ಎಲ್ ನರಸಿಂಹನ್ ಅವರು ಅಂಗೀಕರಿಸಿದ್ದರು. ಇದರೊಂದಿಗೆ ತೆಲಂಗಾಣ ರಾಜ್ಯ ಸ್ಥಾಪನೆಯಾದ ಬಳಿಕ ಮೊಟ್ಟ ಮೊದಲ ವಿಧಾನಸಭೆ ಅವಧಿಗೂ ಮುನ್ನವೇ ವಿಸರ್ಜನೆಗೊಂಡು ಇತಿಹಾಸದಲ್ಲಿ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್