ಸೋನಾಲಿ ಬೇಂದ್ರೆ-ರಾಮ್ ಕದಮ್ 
ದೇಶ

ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಇನ್ನಿಲ್ಲ; ಬಿಜೆಪಿ ಶಾಸಕನ ಟ್ವೀಟ್ ಎಡವಟ್ಟು!

ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಮಾರಕ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಧ್ಯೆ ಸೋನಾಲಿ ಬೇಂದ್ರೆ ಇನ್ನಿಲ್ಲ ಎಂದು ಬಿಜೆಪಿ ಶಾಸಕರೊಬ್ಬರು...

ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಮಾರಕ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಧ್ಯೆ ಸೋನಾಲಿ ಬೇಂದ್ರೆ ಇನ್ನಿಲ್ಲ ಎಂದು ಬಿಜೆಪಿ ಶಾಸಕರೊಬ್ಬರು ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. 
ಇತ್ತೀಚೆಗಷ್ಟೇ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ನಿಮ್ಮನ್ನು ಒಲ್ಲೆ ಎಂದ ಯುವತಿಯನ್ನು ತೋರಿಸಿ ನಾನು ಕಿಡ್ನಾಪ್ ಮಾಡಿ ತಂದು ನಿಮ್ಮ ಜೊತೆ ಸೇರಿಸುತ್ತೇನೆ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದರು. 
ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಸೋನಾಲಿ ಬೇಂದ್ರೆ ಇನ್ನಿಲ್ಲ ಎಂಬ ಸುಳ್ಳು ಸುದ್ದಿ ನಂಬಿ ಶಾಸಕ ರಾಮ್ ಕದಮ್ ಕೂಟ ಸೋನಾಲಿ ಬೇಂದ್ರೆ ಇನ್ನಿಲ್ಲ ಎಂದು ಟ್ವೀಟ್ ಮಾಡಿ ಅಪಹಾಸ್ಯಕ್ಕೀಡಾಗಿದ್ದಾರೆ. 
ರಾಮ್ ಕದಮ್ ಮರಾಠಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ಅಮೋಘ ಅಭಿನಯದ ಮೂಲಕ ಅಭಿಮಾನಿಗಳನ್ನು ರಂಜಿಸಿದ ಬಾಲಿವುಡ್ ಮತ್ತು ಮರಾಠಿ ದಿವಾ ಸೋನಾಲಿ ಬೇಂದ್ರೆ ಇನ್ನಿಲ್ಲ. ಅಮೆರಿಕದಲ್ಲಿ ಅವರು ನಿಧನರಾಗಿದ್ದಾರೆ ಎಂದು ಟ್ವೀಟಿಸಿ ನಗೆಪಾಟಲಿಗೆ ತುತ್ತಾಗಿದ್ದಾರೆ. 
ಸತ್ಯ ತಿಳಿದ ಬಳಿಕ ರಾಮ್ ಕದಮ್ ಮತ್ತೊಂದು ಟ್ವೀಟ್ ಮಾಡಿ ಕ್ಷಮೆಯಾಚಿಸಿದ್ದಾರೆ. ಕಳೆದ ಎರಡು ದಿನಗಳಿಂದ ಸೋನಾಲಿ ಬೇಂದ್ರೆ ಬಗ್ಗೆ ವದಂತಿಗಳು ಹರಿದಾಡುತ್ತಿವೆ. ಸೋನಾಲಿ ಜೀ ಆದಷ್ಟು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ