ಘಾಜಿಯಾಬಾದ್: ಯುವತಿಯ ಮನೆಗೇ ನುಗ್ಗಿದ್ದ ದುಷ್ಕರ್ಮಿಗಳ ತಂಡವೊಂದು ಆಕೆಯ ಕುಟುಂಬಸ್ಥರನ್ನು ಒತ್ತೆಯಾಳುಗಳಾಗಿರಿಸಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಅತಂಕಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಘಾಜಿಯಾಯಾಬಾದ್ ಕಾಕ್ರಾ ಎಂಬ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ತೋರಿಸಿ ಕುಟುಂಬಸ್ಥರನ್ನು ಒತ್ತೆಯಾಳುಗಳಾಗಿರಿಸಿಕೊಂಡಿದ್ದಾರೆ. ಬಳಿಕ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.
ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದು, ಪೊಲೀಸ್ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಘಾಜಿಯಾಬಾದ್ ಡಿವೈಎಸ್ ಪಿ ಪ್ರಭಾತ್ ಕುಮಾರ್ ಅವರು, ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅಂತೆಯೇ ಸುತ್ತಮುತ್ತಲ ಪ್ರದೇಶಗಳನ್ನು ಪರಿಶೀಲನೆ ನಡೆಸಿದ್ದೇವೆ. ಈ ಸಂಬಂಧ ಎಫ್ ಐಆರ್ ಕೂಡ ದಾಖಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics