ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಅಮಿತ್ ಶಾ
ನವದೆಹಲಿ: 2019ರ ಲೋಕಸಭೆ ಚುನಾವಣೆ ಮುಗಿಯುವವರೆಗೂ ಅಮಿತ್ ಶಾ ಅವರನ್ನೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಸಲು ಶನಿವಾರ ತೀರ್ಮಾನಿಸಲಾಗಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಿಜೆಪಿಯ ವಿವಿಧ ರಾಜ್ಯದ ಮುಖ್ಯಸ್ಥರು, ಹಿರಿಯ ಕಾರ್ಯಕಾರಿ ಸದಸ್ಯರು, ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ, ಲೋಕಸಭೆ ಚುನಾವಣೆವರೆಗೆ ಅಮಿತ್ ಶಾ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರೆಸಲು ಮತ್ತು ಪಕ್ಷದ ಚುನಾವಣೆಗಳನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜನಾಥ್ ಸಿಂಗ್ ಅವರು ಕೇಂದ್ರ ಗೃಹಸಚಿವರಾಗಿ ಆಯ್ಕೆಯಾದ ಬಳಿಕ 2014ರಲ್ಲಿ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಅಮಿತ್ ಶಾ ಅವರ ಅವಧಿ 2019ರ ಜನವರಿಯಲ್ಲಿ ಪೂರ್ಣಗೊಳ್ಳಲಿದೆ.