ಸಾಂದರ್ಭಿಕ ಚಿತ್ರ 
ದೇಶ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ: ಜಗಳ ಬಿಡಿಸಲು ಬಂದ ವ್ಯಕ್ತಿಯನ್ನೇ ಇರಿದು ಕೊಂದ ಪಾಪಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ವ್ಯಕ್ತಿಯನ್ನೇ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಜಗಳ ಬಿಡಿಸಲು ಮುಂದಾಗಿದ್ದ ವ್ಯಕ್ತಿಯನ್ನೇ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. 
ಲೊನಿಯ ನಿವಾಸಿಯಾಗಿರುವ ವಸೀಂ ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. ಹತ್ಯೆ ಮಾಡಿದವರ ಕುರಿತು ಈವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. 
ತನ್ನ ಸಂಬಂಧಿಕ ಹಾಗೂ ಸಹೋದರನೊಂದಿಗೆ ವಸೀಂ ಆಟೋದಲ್ಲಿ ಹೋಗುತ್ತಿದ್ದ. ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಈ ವೇಳೆ ಸಹಾಯ ಕೇಳಿದ್ದಾರೆ. ಏನಾಯಿತು ಎಂದು ತಿಳಿಯುವ ಸಲುವಾಗಿ ವಸೀಂ ಆಟೋ ನಿಲ್ಲಿಸಿ ವಿಚಾರಿಸಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ವರುಣ್ ಎಂಬಾತ ಮೂತ್ರ ವಿಸರ್ಜನೆ ಮಾಡುತ್ತಿದ್ದ ಕಾರಣಕ್ಕೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಜಗಳವಾಗುತ್ತಿರುವುದು ತಿಳಿದಿದೆ. ಈ ವೇಳೆ ಮಧ್ಯೆ ಪ್ರವೇಶಿಸಿದ ವಸೀಂ ಜಗಳ ಬಿಡಿಸಲು ಮುಂದಾಗಿದ್ದಾರೆ. ಇದರಿಂದ ಉದ್ರಿಕ್ತನಾದ ವ್ಯಕ್ತಿಯೊಬ್ಬ ವಸೀಂನನ್ನೇ ಇರಿದು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. 
ಇರಿತಕ್ಕೊಳಗಾದ ವಸೀಂ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ