ಅಮಿತ್ ಶಾ 
ದೇಶ

ಬಿಜೆಪಿ ಇನ್ನೂ 50 ವರ್ಷ ಅಧಿಕಾರದಲ್ಲಿರಲಿದೆ: ಅಮಿತ್ ಶಾ

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ...

ನವದೆಹಲಿ: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಮುಂದಿನ 50 ವರ್ಷಗಳ ಕಾಲ ಬಿಜೆಪಿ ದೇಶ ಆಳಲಿದೆ ಎಂದು ಭಾನುವಾರ ಹೇಳಿದ್ದಾರೆ.
ಇಂದು ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯುತ್ತಿರುವ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅಭಿವೃದ್ಧಿ ಕಾರ್ಯಗಳಿಂದಾಗಿ ಬಿಜೆಪಿ ಮತ್ತೆ 2019ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಮತ್ತು ಮುಂದಿನ 50 ವರ್ಷ ಬಿಜೆಪಿಯನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದರು.
2001ರಲ್ಲಿ ಗುಜರಾತ್ ನಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾದ ನಂತರ ಅಲ್ಲಿ ಬಿಜೆಪಿ ಸೋತೆ ಇಲ್ಲ. ಈಗಲೂ ಅಧಿಕಾರದಲ್ಲಿ ಮುಂದುವರೆದಿದೆ. ಅದಕ್ಕೆ ಕಾರಣ ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ಎಂದು ಅಮಿತ್ ಶಾ ಹೇಳಿರುವುದಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ದೇಶದ ರಾಜಕೀಯ ಈಗ ಸಾಧನೆ ಮತ್ತು ಭರವಸೆಯೊಂದಿಗೆ ಮುಂದುವರೆಯುತ್ತಿದೆ ಎಂದು ಶಾ ಹೇಳಿರುವುದಾಗಿ ಪ್ರಸಾದ್ ತಿಳಿಸಿದ್ದಾರೆ.
ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಗೆ ಇಂದು ತೆರೆ ಬಿದ್ದಿದ್ದು, ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಮಹತ್ವದ ಲೋಕಸಭೆ ಚುನಾವಣೆ ದೊಡ್ಡ ಗೆಲುವು ಸಾಧಿಸುವ ನಿರ್ಣಯ ಅಂಗೀಕರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!