ಅಮಿತ್ ಶಾ 
ದೇಶ

ತೈಲ ಬೆಲೆ ದಾಖಲೆ ಏರಿಕೆ: ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿದ ಅಮಿತ್ ಶಾ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು...

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸೋಮವಾರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಮಿತ್ ಶಾ  ಹಾಗೂ ಧರ್ಮೇಂದ್ರ ಪ್ರಧಾನ್ ಅವರು ಭೇಟಿ ಮಾಡಿದ್ದು, ಉಭಯ ನಾಯಕರ ಮಾತುಕತೆಯ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ತೈಲ ಬೆಲೆ ಏರಿಕೆಯೇ ಪ್ರತಿಪಕ್ಷಗಳಿಗೆ ಅಸ್ತ್ರವಾಗುವ ಸಾಧ್ಯತೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಐದು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸಾಧ್ಯತೆಗಳ ಬಗ್ಗೆಯೂ ಅಮಿತ್ ಶಾ ಚರ್ಚಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಇಂದು ಭಾರತ್ ಬಂದ್ ಆಚರಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್