ದೇಶ

ಆಂಧ್ರಪ್ರದೇಶ: ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ಕಡಿತ; 2 ರೂ. ಇಳಿಕೆ

Manjula VN
ಅಮರಾವತಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ದೇಶದಾದ್ಯಂತ ಭಾರತ್ ಬಂದ್ ಆಚರಿಸಲಾಗುತ್ತಿದ್ದು, ಈ ನಡುವಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತನ್ನ ಪಾಲಿನ ವ್ಯಾಟ್'ನ್ನು ಕಡಿತಗೊಳಿಸುವುದಾಗಿ ಆಂಧ್ರಪ್ರದೇಶ ಸರ್ಕಾರ ಘೋಷಣೆ ಮಾಡಿದೆ. 
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆಯನ್ನು ರೂ.2 ಕಡತಗೊಳಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಘೋಷಣೆ ಮಾಡಿದ್ದಾರೆ. 
ಪರಿಷ್ಕೃತ ತರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಚಂದ್ರಬಾಬು ನಾಯ್ಡು ಅವರು ತಿಳಿಸಿದ್ದಾರೆ. 
ಈ ಹಿಂದೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯದ ಶೇ.4 ರಷ್ಟು ವ್ಯಾಟ್'ನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದರು. ಇದರಿಂದ ತೈಲ ಬೆಲೆ ಪ್ರತೀ ಲೀಟರ್'ಗೆ ರೂ.2.50 ಕಡಿತಗೊಳ್ಳಲಿದೆ. 
SCROLL FOR NEXT