ದೇಶ

ಭಾರತ್ ಬಂದ್: ಕಾಂಗ್ರೆಸ್ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿ ವಾಗ್ದಾಳಿ

Nagaraja AB

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ  ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ  ಪ್ರತಿಭಟನೆ ನಡೆಸುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಯುಪಿಎ ಆಡಳಿತಾವಧಿಯಲ್ಲೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆ ಸಂದರ್ಭದಲ್ಲಿ ಸಣ್ಣತನದಿಂದ ಪ್ರತಿಕ್ರಿಯೆ ನೀಡುತ್ತಿದ್ದ ಕಾಂಗ್ರೆಸ್ ಈಗ ಪ್ರತಿಭಟನೆ ನಡೆಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ತೈಲ ಬೆಲೆ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ಪೆಟ್ರೋಲ್ ನಿಂದ ಇಡೀ ಸಾರಿಗೆ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದರಿಂದ  ಅದನ್ನು ಆದ್ಯತೆ ಮೇರೆಗೆ ಪರಿಗಣಿಸಬೇಕಾಗುತ್ತದೆ. ಪೆಟ್ರೋಲ್ 40 ರೂ. ಗಿಂತ ಹೆಚ್ಚಿರಬಾರದೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪೆಟ್ರೋಲ್ ನ್ನು 40 ರೂ. ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಪೆಟ್ರೋಲಿಯಂ ಖಾತೆ ಸಚಿವ  ಧರ್ಮೇಂದ್ರ ಪ್ರಧಾನ್ ಅವರಿಗೆ  ಪ್ರಧಾನಿ ನರೇಂದ್ರಮೋದಿ ನಿರ್ದೇಶನ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

SCROLL FOR NEXT