ದೇಶ

ಭಾರತ್ ಬಂದ್ ಗೂ ಜಗ್ಗದ ಭಾರತ ಸರ್ಕಾರ: ಅಬಕಾರಿ ಸುಂಕ ಕಡಿಮೆ ಮಾಡಲು ಸ್ಪಷ್ಟ ನಿರಾಕರಣೆ!

Srinivas Rao BV
ಭಾರತ್ ಬಂದ್ ನ ಹೊರತಾಗಿಯೂ ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಅಲ್ಲಗಳೆದಿದೆ. 
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವುದಕ್ಕೆ ಅಬಕಾರಿ ಸುಂಕ ವಿಧಿಸುವುದೂ ಒಂದು ಪ್ರಮುಖ ಕಾರಣವಾಗಿದ್ದು, ಭಾರತ್ ಬಂದ್ ನಂತರವಾದರೂ ರಾಜ್ಯ, ಕೇಂದ್ರ ಸರ್ಕಾರಗಳು ಅಬಕಾರಿ ಸುಂಕ ಕಡಿಮೆ ಮಾಡುವ ನಿರೀಕ್ಷೆ ಇತ್ತು. ಆದರೆ ಆಂಧ್ರಪ್ರದೇಶದ ಸರ್ಕಾರ ಹೊರತುಪಡಿಸಿ ಬೇರೆ ಸರ್ಕಾರಗಳು ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಕುರಿತು ಯಾವುದೇ ನಿರ್ಧಾರ ಪ್ರಕಟಿಸಿಲ್ಲ. 
ಅಬಕಾರಿ ಸುಂಕ ಕಡಿಮೆ ಮಾಡುವುದರಿಂದ ಸರ್ಕಾರಕ್ಕೆ ಹೊರೆ ಹೆಚ್ಚಾಗಲಿದೆ ಈ ಹಿನ್ನೆಲೆಯಲ್ಲಿ ಸರ್ಕಾರಗಳು ಅಬಕಾರಿ ಸುಂಕ ಕಡಿಮೆ ಮಾಡಲು ಮುಂದಾಗುತ್ತಿಲ್ಲ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. 
SCROLL FOR NEXT