ಶಿವಸೇನೆಯನ್ನು 'ನಾಯಿ'ಗೆ ಹೋಲಿಸಿದ ರಾಜ್ ಠಾಕ್ರೆ
ಮಹಾರಾಷ್ಟ್ರ ನವ ನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು, ರಾಜ್ಯದಲ್ಲಿ ಭಾರತ್ ಬಂದ್...
ಮುಂಬೈ: ಮಹಾರಾಷ್ಟ್ರ ನವ ನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು, ರಾಜ್ಯದಲ್ಲಿ ಭಾರತ್ ಬಂದ್ ವಿಫಲವಾಗಿದೆ ಎಂದ ಶಿವಸೇನೆಯನ್ನು ನಾಯಿಗೆ ಹೋಲಿಸಿದ್ದಾರೆ.
ತೈಲ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್ ವಿಫಲವಾಗಿದೆ ಎಂದ ಶಿವಸೇನೆ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್ ಠಾಕ್ರೆ, ''ನಾಯಿಯ ಒಂದು ತಳಿ ಇದೆ. ಅದಕ್ಕೆ ಯಾವ ದಾರಿಯಲ್ಲಿ ಹೋಗಬೇಕು ಎಂಬುದು ಗೊತ್ತಿಲ್ಲ. ಶಿವಸೇನೆಯ ಪರಿಸ್ಥಿತಿ ಸಹ ಹಾಗೆ ಇದೆ. ಹಣ ಬರುವುದು ನಿಂತ ತಕ್ಷಣ ಮೈತ್ರಿಯಿಂದ ಹೊರ ಬರುವ ಬಗ್ಗೆ ಮಾತನಾಡುತ್ತದೆ. ಕೆಲಸ ಮುಗಿದ ನಂತರ ಮತ್ತೆ ಸುಮ್ಮನಾಗುತ್ತೆ' ಎಂದು ಟೀಕಿಸಿದ್ದಾರೆ.
ತಮ್ಮ ಸಹೋದರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಯಾವುದೇ ಮಹತ್ವ ನೀಡಬೇಕಾದ ಅಗತ್ಯ ಇಲ್ಲ. ಕಳೆದ ನಾಲ್ಕು ವರ್ಷಗಳಿಂದ ಇಡೀ ದೇಶವೇ ನೋಡುತ್ತಿದೆ. ಅವರು ಕೇವಲ ಸಾಮ್ನಾ ಸಂಪಾದಕೀಯದಲ್ಲಿ ಮಾತ್ರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಬರೆಯುತ್ತಾರೆ. ಅದು ಬಿಟ್ಟು ಬೇರೆ ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿಲ್ಲ ಎಂದು ರಾಜ್ ಠಾಕ್ರೆ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ ಠಾಕ್ರೆ ಸಹ ಬೆಂಬಲ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.