ವಿಜಯ್ ಮಲ್ಯ 
ದೇಶ

ಭಾರತ ಬಿಡುವ ಮುನ್ನ ಹಣಕಾಸು ಸಚಿವರ ಭೇಟಿ: ನಾನು ರಾಜಕೀಯ ಬಲಿಪಶು- ಮಲ್ಯ

2016 ರಲ್ಲಿ ದೇಶ ತೊರೆಯುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದೆ ಎಂದು ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ...

ನವದೆಹಲಿ : 2016 ರಲ್ಲಿ   ದೇಶ ತೊರೆಯುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದೆ ಎಂದು  ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ  ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವಿಜಯ್ ಮಲ್ಯ ಅವರ ಹೇಳಿಕೆಯನ್ನು ತಳ್ಳಿ ಹಾಕಿರುವ ಸಚಿವ ಅರುಣ್ ಜೇಟ್ಲಿ,  2014ರ ನಂತರ ವಿಜಯ್ ಮಲ್ಯ ಅವರ ಭೇಟಿಗೆ ಅವಕಾಶ ನೀಡಿಯೇ ಇಲ್ಲ. ಆದರೆ, ದೇಶಭ್ರಷ್ಟ ಮದ್ಯ ಉದ್ಯಮಿ ತಮ್ಮ ರಾಜಸ್ಯಭಾ ಸದಸ್ಯತ್ವ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಸಭಾ ಸದಸ್ಯರಾಗಿದ್ದ ವಿಜಯ್ ಮಲ್ಯ ಅವರು ಒಂದು ದಿನ ಕಲಾಪ ಮುಗಿದ ಬಳಿಕ ನಾನು ನನ್ನ ಕೋಣೆ ಹೋಗುತ್ತಿದ್ದಾಗ ಅವರು ನನ್ನನ್ನು ತಡೆದು ಸೆಟ್ಲಮೆಂಟ್ ಪ್ರಸ್ತಾಪ ಮಾಡಿದ್ದರು. ಆದರೆ ನಾನು ಅವರೊಂದಿಗೆ ಮಾತುಕತೆ ಮುಂದುವರೆಸದೆ, ಬ್ಯಾಂಕ್ ಗಳೊಂದಿಗೆ ಇತ್ಯರ್ಥ ಮಾಡಿಕೊಳ್ಳಿ ಎಂದು ಹೇಳಿದ್ದೆ. ಅಲ್ಲದೆ ಅವರ ಬಳಿ ಇದ್ದ ಪೇಪರ್ ಗಳನ್ನು ಸಹ ನಾನು ಸ್ವೀಕರಿಸಲಿಲ್ಲ ಎಂದು ಜೇಟ್ಲಿ ಹೇಳಿದ್ದಾರೆ.

ಅರುಣ್ ಜೇಟ್ಲಿ ಅವರ ಈ ಹೇಳಿಕೆ ಬಳಿಕ ಪ್ರತಿಕ್ರಿಯಿಸಿರುವ  62 ವರ್ಷದ ವಿಜಯ್ ಮಲ್ಯ, ಜಿನಿವಾಕ್ಕೆ ತೆರಳುವ ಮುನ್ನ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ್ದೆ, ಬ್ಯಾಂಕ್  ಸೆಟ್ಲಮೆಂಟ್  ಮಾಡಿಕೊಡಿಕೊಳ್ಳುತ್ತೇನೆ ಎಂದು ಹೇಳಿದ್ದೆ. ಇದು ಸತ್ಯ ಎಂದು ವಿಜಯ್ ಮಲ್ಯ ಹೇಳಿದ್ದಾರೆ.

 ನಾನು ರಾಜಕೀಯ ಪುಟ್ಬಾಲ್ ರೀತಿಯಲ್ಲಿ ಆಗಿದ್ದೇನೆ. ನನ್ನ 15 ಸಾವಿರ ಕೋಟಿ ರೂಪಾಯಿ ಆಸ್ತಿಮೌಲ್ಯದ ವಿಚಾರ ಕರ್ನಾಟಕದ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದ್ದು, ಎಲ್ಲಾ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳುವುದಾಗಿ ಮಲ್ಯ ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯ್ ಮಲ್ಯ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ನನ್ನನ್ನು ಇಷ್ಟಪಡುತ್ತಿಲ್ಲ, ನಾನು ರಾಜಕೀಯ ಬಲಿಪಶುವಾಗಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!