ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಸೊಪೋರ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾಪಡೆ ಗುರುವಾರ ಭಾರೀ ಕಾರ್ಯಾಚರಣೆ ನಡೆಸುತ್ತಿವೆ.
ಸೋಪೋರ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತಂತೆ ಮಾಹಿತಿ ತಿಳಿದ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಎನ್'ಕೌಂಟರ್ ನಡೆಸಲು ಆರಂಭಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.