ನವದೆಹಲಿ: ದೇಶದಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ದೇಶದ ಜನತೆಗೆ ಮಂಗಳಕರ ಗಣೇಶ ಚತುರ್ಥಿ ಹಬ್ಬ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ.