ಶೆಹಜಾದ್ ಪೂನವಾಲ 
ದೇಶ

2013ರಲ್ಲಿ ರಾಹುಲ್ ಗಾಂಧಿ ನೀರವ್ ಮೋದಿ ಭೇಟಿ ಮಾಡಿದ್ದರು: ಪೂನವಾಲ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರನ್ನು ಭೇಟಿ ಮಾಡಿದ್ದನ್ನು ತಾನು ನೋಡಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತ ಶೆಹಜಾದ್ ಪೂನವಾಲ ಅವರು ಗುರುವಾರ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 2013ರಲ್ಲಿ ಹೋಟೆಲ್ ವೊಂದರಲ್ಲಿ ನೀರವ್ ಮೋದಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಮೆಹುಲ್ ಚೋಕ್ಸಿ ಸಹ ಇದ್ದರು ಎಂದು ಪೂನವಾಲ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರೇ ನೀವು ನೀರವ್ ಮೋದಿ ಭೇಟಿ ಮಾಡಿರುವುದಕ್ಕೆ ನಾನೇ ಸಾಕ್ಷಿಯಾಗಿದ್ದು, ಈ ಸಂಬಂಧ ನಾನು ಸುಳ್ಳು ಪತ್ತೆ ಪರೀಕ್ಷೆಗೂ ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ? ಎಂದು ಪೂನವಾಲ ಪ್ರಶ್ನಿಸಿದ್ದಾರೆ.
ನಿನ್ನೆಯಷ್ಟೇ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ, ತಾನು ಭಾರತ ಬಿಡುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿರುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಪೂನವಾಲ, ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಯುದ್ಧ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬೀನ್ ಸೂಚನೆ?

ಕಬ್ಬನ್ ಪಾರ್ಕ್ Namma Metro ತಾಂತ್ರಿಕ ದೋಷ ಸರಿಪಡಿಸಿದ BMRCL; ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭ