ದೇಶ

ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್!

Srinivas Rao BV
ಶ್ರೀನಗರ: ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಅ.08 ಹಾಗೂ 16 ರಂದು ಮತದಾನ ನಡೆಯಲಿದೆ. 
ಒಟ್ಟು 4 ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಹೇಳಿದ್ದು, ಅ.08, 13 ಹಾಗೂ 16 ರಂದು ಚುನಾವಣೆ ನಡೆಯಲಿದ್ದು ಅ.20 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸಲೀನ್ ಕಬ್ರಾ ಹೇಳಿದ್ದಾರೆ.  ಸ್ಥಳೀಯ ಜನತೆಗೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 35ಎ ಕುರಿತು ಕೇಂದ್ರ ಸರ್ಕಾರ ನಿಲುವು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿ ಜಮ್ಮು-ಕಾಶ್ಮೀರದ ಎರಡು ಪ್ರಮುಖ ಪ್ರಾದೇಶಿಕ ಪಕ್ಷಗಳಾದ ಎನ್ ಸಿ ಹಾಗೂ ಪಿಡಿಪಿ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿವೆ. 
2016 ರಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯಬೇಕಿತ್ತಾದರೂ ಕಾಶ್ಮೀರದಲ್ಲಿ ನಿರಂತರ 5 ತಿಂಗಳ ಕಾಲ ಅಸ್ಥಿರತೆ ಇದ್ದ ಕಾರಣದಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ. 
SCROLL FOR NEXT