ಸಾಂದರ್ಭಿಕ ಚಿತ್ರ 
ದೇಶ

ಮಣಿಪುರ: ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿ ಮೇಲೆ ಹಲ್ಲೆ; ಐವರ ಬಂಧನ

ಮಣಿಪುರ ರಾಜ್ಯದ ಪಶ್ಚಿಮ ಇಂಪಾಲ ಜಿಲ್ಲೆಯಲ್ಲಿ ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಂಪಾಲ್ : ಮಣಿಪುರ ರಾಜ್ಯದ ಪಶ್ಚಿಮ ಇಂಪಾಲ ಜಿಲ್ಲೆಯಲ್ಲಿ ವಾಹನ ಕಳ್ಳತನ ಶಂಕೆಯಿಂದ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತೌರೌಯ್ ಜಮ್ ಅವಾಂಗ್  ಲೈಕೈ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪಶ್ಟಿಮ ಇಂಪಾಲ ಪೊಲೀಸ್ ವರಿಷ್ಠಾಧಿಕಾರಿ ಜೊಗೆಶ್ಚಂದ್ರ  ಹೊಬಿಜಮ್ ಹೇಳಿದ್ದಾರೆ.

ದ್ವಿಚಕ್ರ ವಾಹನ ಮಾಲೀಕ ಕೂಡಾ ಈ ಪ್ರಕರಣದಲ್ಲಿ ಭಾಗಿಯಾದ ಶಂಕೆಯಿಂದ ಆತನನ್ನು ಕೂಡಾ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಏಕೆ ಆತನನ್ನು ಬಂಧಿಸಲಾಯಿತು ಎಂಬ ಬಗ್ಗೆ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸುತ್ತಿಲ್ಲ.

ಐಪಿಸಿ ಸೆಕ್ಷನ್ ನ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನಗರ ನ್ಯಾಯಾಲಯ ಇಂದು  ಒಪ್ಪಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ  ದೂರು ದಾಖಲಿಸಿಕೊಂಡಿದ್ದು, ಸೆಪ್ಟೆಂಬರ್ 22 ರೊಳಗೆ ಪ್ರಕರಣದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ  ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ