ಮನೋಹರ್ ಪರ್ರಿಕರ್ 
ದೇಶ

ಗೋವಾ ಸಿಎಂ ಪರ್ರಿಕರ್ ಅಧಿಕಾರ ಹಸ್ತಾಂತರಿಸಬೇಕು: ಬಿಜೆಪಿ ಮಿತ್ರಪಕ್ಷದ ಶಾಸಕ

ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಹಿರಿಯ ಸಚಿವರೊಬ್ಬರಿಗೆ ಹಸ್ತಾಂತರಿಸುವುದು ಉತ್ತಮ ಎಂದು ಬಿಜೆಪಿ...

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಹಿರಿಯ ಸಚಿವರೊಬ್ಬರಿಗೆ ಹಸ್ತಾಂತರಿಸುವುದು ಉತ್ತಮ ಎಂದು ಬಿಜೆಪಿ ಮಿತ್ರಪಕ್ಷದ ಶಾಸಕರೊಬ್ಬರು ಹೇಳಿದ್ದಾರೆ.
62 ವರ್ಷದ ಮನೋಹರ್ ಪರ್ರಿಕರ್ ಅವರ ಆರೋಗ್ಯ ದಿನೇ ದಿನೇ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅವರ ಗೈರಿನ ಹಿನ್ನೆಲೆಯಲ್ಲಿ ಸಂಪುಟದ ಹಿರಿಯ ಸಚಿವರಿಗೆ ಸಿಎಂ ಸ್ಥಾನವನ್ನು ಹಸ್ತಾಂತರಿಸುವುದು ಒಳ್ಳೆಯದ್ದು ಎಂದು ಮಿತ್ರಪಕ್ಷ ಮಹಾರಾಷ್ಟ್ರವಾದಿ ಗೋಮಂತಕ್ ಪಾರ್ಟಿಯ ಅಧ್ಯಕ್ಷ ದೀಪಕ್ ದವಾಲಿಕರ್ ಹೇಳಿದ್ದಾರೆ. 
ಇಂತಹ ಪರಿಸ್ಥಿತಿಯಲ್ಲಿ ಗೋವಾದಲ್ಲಿ ಮೈತ್ರಿ ಸರ್ಕಾರ ಸುಗಮವಾಗಿ ನಡೆಯಬೇಕಾದರೆ ಹಿರಿಯ ಸಚಿವರೊಬ್ಬರು ಸಿಎಂ ಹುದ್ದೆಯನ್ನು ಅಲಂಕರಿಸಬೇಕಿದೆ. ಕಳೆದ ಎಂಟು ತಿಂಗಳಿನಿಂದ ರಾಜ್ಯದಲ್ಲಿ ಸುಗಮವಾಗಿ ಅಧಿಕಾರವನ್ನು ನಡೆಸಲು ಸಾಧ್ಯವಾಗಿಲ್ಲ ಎಂದು ದೀಪಕ್ ಹೇಳಿದ್ದಾರೆ. 
ಕಳೆದ ವಾರ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಅಮೆರಿಕದಿಂದ ವಾಪಸ್ಸಾಗಿದ್ದ ಮನೋಹರ್ ಪರ್ರಿಕರ್, ಕಳೆದ ಗುರುವಾರ ಮತ್ತೆ ಅನಾರೋಗ್ಯ ಕಾಣಿಸಿಕೊಂಡು ಉತ್ತರ ಗೋವಾ ಜಿಲ್ಲೆಯ ಕಾಂಡೊಲಿಮ್ ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇದೀಗ ಅಲ್ಲಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT