ಪೆಟ್ರೋಲ್,ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ !
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ದುಬಾರಿ ಇಂಧನ ಖರೀದಿಯಿಂದ ನಾಗರಿಕರಿಗೆ ಇನ್ನೂ ಪರಿಹಾರ ಸಿಗದಂತಾಗಿದೆ.
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ದುಬಾರಿ ಇಂಧನ ಖರೀದಿಯಿಂದ ನಾಗರಿಕರಿಗೆ ಇನ್ನೂ ಪರಿಹಾರ ಸಿಗದಂತಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 28 ಪೈಸೆ ಏರಿಕೆಯಾದ್ದರೆ, ಡೀಸೆಲ್ ಬೆಲೆಯಲ್ಲಿ 18 ಪೈಸೆ ಹೆಚ್ಚಳಗೊಂಡಿದೆ.
ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಪೆಟ್ರೋಲ್ ಬೆಲೆ 90 ರೂ. ಅಸುಪಾಸಿನಲ್ಲಿದ್ದರೆ ಡೀಸೆಲ್ ಬೆಲೆ 78.26 ರೂಪಾಯಿ ಆಗಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ನೇತೃತ್ವದಲ್ಲಿ 21 ಇತರ ಪ್ರಾದೇಶಿಕ ಪಕ್ಷಗಳು ಭಾರತ್ ಬಂದ್ ನಡೆಸಿ ವಾರ ಕಳೆದರೂ ತೈಲ ಬೆಲೆಯಲ್ಲಿ ಮಾತ್ರ ಯಾವುದೇ ಇಳಿಕೆ ಆಗಿಲ್ಲ. ಬೆಲೆ ತಗ್ಗಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸುತ್ತಿದ್ದಾರೆ.
ಆದಾಗ್ಯೂ, ಸರ್ಕಾರ ಮಾತ್ರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದ ಕಾರಣ ನೀಡಿ ಕೈ ತೊಳೆದುಕೊಳ್ಳುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.