68ರ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಶುಭಾಶಯ ಕೋರಿದ ರಾಹುಲ್, ಸಿದ್ದರಾಮಯ್ಯ, ಕುಮಾರಸ್ವಾಮಿ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ 68ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಹುಟ್ಟುಹಬ್ಬ ಹಿನ್ನಲೆಯಲ್ಲಿ ಮೋದಿಯವರಿಗೆ ಸದಾಕಾಲ ಉತ್ತಮ ಆರೋಗ್ಯ ಹಾಗೂ ಸಂತೋಷ ಸಿಗಲೆಂದು ಕೋರುತ್ತೇನೆಂದು ಹೇಳಿದ್ದಾರೆ.
ಇದರಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೂ ಕೂಡ ಟ್ವೀಟ್ ಮಾಡಿದ್ದು, ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ. ಜನ್ಮದಿನದ ಶುಭಾಶಯಗಳು ನರೇಂದ್ರ ಮೋದಿಯವರೇ. ನಿಮಗೆ ಉತ್ತಮ ಆರೋಗ್ಯ. ದೀರ್ಘ ಆಯುಷ್ಯ ಮತ್ತು ಜನರಿಗೆ ನೀವು ನೀಡಿದ ಭರವಸೆಗಳನ್ನು ಈಡೇರಿಸುವ ಶಕ್ತಿ ಸಿಗಲಿ ಎಂದು ಹಾರೈಸುತ್ತೇನೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics