ಸಾಂದರ್ಭಿಕ ಚಿತ್ರ 
ದೇಶ

ಚಂಡೀಗಡ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; 19 ವರ್ಷದ ಯುವಕನ ಬಂಧನ

ರಿವಾರಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ 19 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಚಂಡೀಗಡ : ರಿವಾರಿ ಜಿಲ್ಲೆಯಲ್ಲಿ  ಅಪ್ರಾಪ್ತ  ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ 19 ವರ್ಷದ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಕೋಚಿಂಗ್ ತರಗತಿಯ ಮುಖ್ಯಸ್ಥೆ 19 ವರ್ಷದ ಯುವತಿಯನ್ನು  ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ  ಬೆನ್ನಲ್ಲೇ ಇಂದು ಮತ್ತೊಂದು ಅತ್ಯಾಚಾರ ಪ್ರಕರಣ ರಿವಾರಿ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಈ ಸಂಬಂಧ 17 ವರ್ಷದ  ಬಾಲಕಿ ತನ್ನ ಮಾಜಿ ಶಾಲಾ ಸಹಪಾಠಿ ವಿರುದ್ಧ ದೂರು ದಾಖಲಿಸಿದ್ದಾಳೆ ಎಂದು ದಾರುಹೇರಾ  ಠಾಣಾಧಿಕಾರಿ ಇನ್ಸ್ ಪೆಕ್ಟರ್ ಜಗದೀಶ್ ಪರ್ಶದ್ ತಿಳಿಸಿದ್ದಾರೆ.

ತನ್ನ ಮಾಜಿ ಸಹಪಾಠಿಯಿಂದ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ಆಕೆ ತಿಳಿಸಿದ್ದು, ಕೂಡಲೇ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿರುವುದಾಗಿ ಅವರು ಹೇಳಿದ್ದಾರೆ.

ಹರಿಯಾದ ಜಿಂದ್ ಜಿಲ್ಲೆಯಲ್ಲಿ ತನ್ನ ಮೇಲೆ ಇಬ್ಬರು ಅತ್ಯಾಚಾರ ನಡೆಸಿದ್ದಾರೆ ಎಂದು ರಿವಾರಿ ಜಿಲ್ಲೆಯ ಮತ್ತೊಬ್ಬ ಮಹಿಳೆ ಆರೋಪಿದ್ದಾರೆ.

 ಸರ್ಕಾರದಿಂದ ಸನ್ಮಾನಿಸಲ್ಪಿಟ್ಟಿದ್ದ ರಿವಾರಿಯ ಟಾಪರ್   19 ವರ್ಷದ ಯುವತಿಯನ್ನು ಕಳೆದ ಬುಧವಾರ ಬಸ್ ನಿಲ್ದಾಣದಿಂದ ಅಪಹರಿಸಿದ್ದ ದುಷ್ಕರ್ಮಿಗಳು ಕೃಷಿ ಜಮೀನೊಂದರಲ್ಲಿ   ಅತ್ಯಾಚಾರ ನಡೆಸಿದ್ದರು.

ಸಾಮೂಹಿಕ ಅತ್ಯಾಚಾರದ ಬಗ್ಗೆ ನೈತಿಕ ಹೊಣೆ ಹೊತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್  ಕಟ್ಟರ್  ತಮ್ಮ ಸ್ಥಾನಕ್ಕೆ  ರಾಜೀನಾಮೆ ನೀಡಬೇಕೆಂದು  ಪ್ರತಿಪಕ್ಷಗಳು ಆಗ್ರಹಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!