ನವದೆಹಲಿ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿತೀಶ್ ಕುಮಾರ್ ಅವರು ಇಂದು ಬೆಳಗ್ಗೆ 8.30ರ ಸುಮಾರಿಗೆ ಆಸ್ಪತ್ರೆಯ ಖಾಸಗಿ ವಾರ್ಡ್ ಗೆ ದಾಖಲಾಗಿದ್ದಾರೆ ಎಂದು ಏಮ್ಸ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಫ ಮತ್ತು ವೈರಲ್ ಫೀವರ್‌ನಿಂದ ಬಳಲುತ್ತಿರುವ ನಿತೀಶ್ ಕುಮಾರ್ ಅವರು, ದೀರ್ಘಕಾಲದ ಅಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ ಅಥವಾ ಸಿಒಪಿಡಿ ಎಂಬ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. ಜತೆಗೆ, ಕಣ್ಣು ಹಾಗೂ ಮಂಡಿ ನೋವಿನ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ನಿತೀಶ್ ಕುಮಾರ್ ಅವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.