ಸಂಗ್ರಹ ಚಿತ್ರ 
ದೇಶ

ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಸಿಎಂ ಕೇಜ್ರಿವಾಲ್, ಸಿಸೋಡಿಯಾಗೆ ಸಮನ್ಸ್ ಜಾರಿ

ದೆಹಲಿ ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ದೆಹಲಿ ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ದೆಹಲಿ ಕೋರ್ಟ್ ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಸಚಿವ ಮನೀಶ್ ಸಿಸೋಡಿಯಾ ಅವರಿಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ  ಸಮನ್ಸ್ ಜಾರಿ ಮಾಡಿದೆ. ಅಂತೆಯೇ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದ್ದು, ಅಂದೇ ಖುದ್ದು ಹಾಜರಿಗೆ ಸೂಚಿಸಲಾಗಿದೆ.
ಇನ್ನು ಇದಕ್ಕೂ ಮುನ್ನ ಹಲ್ಲೆ ಪ್ರಕರಣ ಸಂಬಂಧ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 3000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಚಾರ್ಜ್ ಶೀಟ್ ನಲ್ಲಿ ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೇ ಜವಾಬ್ದಾರರು ಎಂದು ಆರೋಪಿಸಲಾಗಿದೆ. ಕಾರ್ಯಕರ್ತರ ಮೂಲಕ ಮುಖ್ಯ ಕಾರ್ಯದರ್ಶಿಗಳಿಗೆ ಬೆದರಿಕೆ ಹಾಕಿಸಲಾಗಿದ್ದು, ಅಲ್ಲದೆ ಅವರ ಅನುಪಸ್ಥಿತಿಯಲ್ಲೇ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆಯಾಗಿದೆ. ಘಟನೆ ಉದ್ದೇಶ ಪೂರ್ವಕವಾಗಿದ್ದು, ಅವರಿಗೆ ಅನುಮಾನ ಮಾಡಲೆಂದೇ ಸಿಎಂ ನಿವಾಸಕ್ಕೆ ಕರೆಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಮ್ಮ ಚಾರ್ಜ್ ಶೀಟ್ ನಲ್ಲಿ ದಾಖಲಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಆಪ್ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಟಿವಿ ಜಾಹಿರಾತು ನೀಡುವ ಸಂಬಂಧ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮತ್ತು ದೆಹಲಿ ಸರ್ಕಾರದ ನಡುವೆ ಭಿನ್ನಮತ ಸ್ಫೋಟಗೊಂಡಿತ್ತು. ಈ ಸಂಬಂಧ ಕರೆಯಲಾಗಿದ್ದ ಸಭೆ ವೇಳೆ ಕೇಜ್ರಿವಾಲ್ ನಿವಾಸದಲ್ಲಿ ಆಪ್ ಮುಖಂಡರಾದ ಅಮಾನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರು ಹಲ್ಲೆ ಮಾಡಿದ್ದರು. ಇದೇ ವಿಚಾರವನ್ನು ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದ್ದು, ಪೊಲೀಸರ ಆರೋಪಗಳನ್ನು ಆಪ್ ಸರ್ಕಾರ ನಿರಾಕರಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT