ದೇಶದ ಕಾವಲುಗಾರ ಕಳ್ಳ ಎಂಬ ಕೂಗು ಕೇಳಿಬರುತ್ತಿದೆ: ಪ್ರಧಾನಿ ವಿರುದ್ಧ ರಾಹುಲ್ ಟೀಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ರಾಹುಲ್ ಗಾಂಧಿ, ದೇಶದ ಕಾವಲುಗಾರ ಕಳ್ಳ ಎಂಬ ಕೂಗು ಕೇಳಿಬರುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ನೀಡಿರುವ ಈ ಹೇಳಿಕೆಯನ್ನು ಬಿಜೆಪಿ ತಕ್ಷಣವೇ ಖಂಡಿಸಿದೆ. ರಾಹುಲ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಪ್ರಧಾನಿ ಬಗ್ಗೆ ರಾಹುಲ್ ಗಾಂಧಿಗೆ ಗೌರವ ಇಲ್ಲ ಎಂಬುದು ಈ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ರಾಫೆಲ್ ಒಪ್ಪಂದದ ಬಗ್ಗೆ ಪ್ರಧಾನಿ ಮೌನ ಹಾಗೂ ಸುಸ್ತಿದಾರ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಮೋದಿ ವಿಫಲವಾಗಿರುವುದರ ಕುರಿತು ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ತಾನೊಬ್ಬ ಕಾವಲುಗಾರ ಎಂದು ಹೇಳಿದ್ದರು. ಆದರೆ ಈಗ ದೇಶದ ಬೀದಿಗಳಲ್ಲಿ ದೇಶದ ಕಾವಲುಗಾರ ಕಳ್ಳ ಎಂಬ ಕೂಗು ಕೇಳಿಬರುತ್ತಿದೆ ಎಂದು ಹೇಳಿದ್ದಾರೆ.