ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ-ಸುಷ್ಮಾ ಸ್ವರಾಜ್ 
ದೇಶ

ಶಾಂತಿ ಮಾತುಕತೆ: ಪಾಕಿಸ್ತಾನ ಪ್ರಧಾನಿ ಪ್ರಸ್ತಾವನೆಗೆ ಭಾರತ ಒಪ್ಪಿಗೆ!

ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡಲಿದ್ದೇವೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು.

ನವದೆಹಲಿ: ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡಲಿದ್ದೇವೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು.  ಈಗ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಸ್ತಾವನೆಗೆ ಭಾರತ ಒಪ್ಪಿಗೆ ಸೂಚಿಸಿದ್ದು ಮತ್ತೆ ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗುವ ಸೂಚನೆ ಲಭ್ಯವಾಗಿದೆ. 
ಪಾಕಿಸ್ತಾನ-ಭಾರತ ವಿದೇಶಾಂಗ ಸಚಿವರ ಮಾತುಕತೆ ನಡೆಸುವ ಇಮ್ರಾನ್ ಖಾನ್ ಅವರ ಪ್ರಸ್ತಾವನೆಗೆ ಭಾರತ ಒಪ್ಪಿಗೆ ಸೂಚಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಉಭಯ ವಿದೇಶಾಂಗ ಸಚಿವರೂ ಪಾಲ್ಗೊಳ್ಳಲಿದ್ದು, ಈ ವೇಳೆ ಮಾತುಕತೆ ನಡೆಸುವುದಕ್ಕೆ ಭಾರತ ಸಮ್ಮತಿ ಸೂಚಿಸಿದೆ. 
ಈ ಬಗ್ಗೆ ಸ್ವತಃ ಎಂಇಎ ವಕ್ತಾರ ರವೀಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ನಡೆಸುವುದಕ್ಕೆ ಮನವಿ ಮಾಡಿತ್ತು. ಭಾರತ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಸುಷ್ಮಾ ಸ್ವರಾಜ್ ಹಾಗೂ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ ಯುಎನ್ ಜಿಎ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ. 
ಭಾರತ ದ್ವಿಪಕ್ಷೀಯ ಮಾತುಕತೆಗೆ ಒಪ್ಪಿಗೆ ಸೂಚಿಸಿದೆ ಎಂದ ಮಾತ್ರಕ್ಕೆ ಪಾಕ್ ಕುರಿತ ಭಾರತದ ನೀತಿಗಳಿಗೆ ಸಂಬಂಧಿಸಿದಂತೆ ಬದಲಾವಣೆಯೇನೂ ಇರುವುದಿಲ್ಲ, ಇದು ಪಾಕ್ ಮನವಿಯ ಮೇರೆಗೆ ನಡೆಯುತ್ತಿರುವ ಚುನಾವಣೆ ಎಂದೂ ಎಂಇಎ ವಕ್ತಾರರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video