ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರದಲ್ಲಿ ಕಾಮುಕರ ಪೈಶಾಚಿಕ ಕೃತ್ಯ: 2 ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಓರ್ವ ಬಾಲಕಿ ಸಾವು

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರು ಎಸಗಿದ ಪೈಶಾಚಿಕ ಕೃತ್ಯಕ್ಕೆ ಅಮಾಯಕ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ಮಹಾರಾಷ್ಟ್ರದ ಹಿಂಜ್ವಾಡಿಯಲ್ಲಿ ನಡೆದಿದೆ...

ಪುಣೆ: ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರು ಎಸಗಿದ ಪೈಶಾಚಿಕ ಕೃತ್ಯಕ್ಕೆ ಅಮಾಯಕ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ಮಹಾರಾಷ್ಟ್ರದ ಹಿಂಜ್ವಾಡಿಯಲ್ಲಿ ನಡೆದಿದೆ. 
ಹಿಂಜ್ವಾಡಿ ಪ್ರದೇಶದಲ್ಲಿ ಬಾಲಕಿಯರ ಮನೆಯಿದ್ದು, ಭಾನುವಾರ ಮಧ್ಯಾಹ್ನ ಇಬ್ಬರೂ ಬಾಲಕಿಯರು ಮನೆಯ ಹತ್ತಿರವೇ ಇದ್ದ ದೇಗುಲದ ಬಳಿ ಆಟವಾಡಲು ತೆರಳಿದ್ದರು. 
ಇದೇ ಸ್ಥಳದ ನಿವಾಸಿಗಳಾದ ಇಬ್ಬರು ಕಾಮುಕರು ಚಾಕೋಲೇಟ್ ಕೊಡಿಸುವುದಾಗಿ ಬಾಲಕಿಯರಿಗೆ ಆಸೆ ತೋರಿಸಿ ಕರೆದುಕೊಂಡು ಹೋಗಿದ್ದಾರೆ. 
ಬಾಲಕಿಯರನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿರುವ ಕಾಮುಕರು, ನಂತರ ಅವರ ಮೇಲೆ ಪೈಶಾಚಿಕ ಕೃತ್ಯವೆಸಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. 
ಅತ್ಯಾಚಾರದ ಬಳಿಕ ಬಾಲಕಿಯರಿಗೆ ಬೆದರಿಕೆ ಹಾಕಿರುವ ಕಾಮುಕರು, ಸ್ಥಳದಿಂದ ಪರಾರಿಯಾಗಿದ್ದಾರೆ. ಇದರಿಂದ ಹೆದರಿದ ಬಾಲಕಿಯರು ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿಲ್ಲ. 
ಘಟನೆ ಬಳಿಕ ಮನೆಗೆ ತೆರಳಿದ ಬಾಲಕಿಯರು ಮನೆಯಲ್ಲಿ ಮೌನ ತಾಳಿದ್ದಾರೆ. ಅಲ್ಲದೆ, ಅತ್ಯಾಚಾರಕ್ಕೊಳಗಾದ ಇಬ್ಬರು ಬಾಲಕಿಯರ ಪೈಕಿ ಓರ್ವ ಬಾಲಕಿ ನೋವು ಹಾಗೂ ನಿಶ್ಯಕ್ತಿಯಿಂದ ಬಳಲಲು ಆರಂಭಿಸಿದ್ದಾಳೆ. ಕೂಡಲೇ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ವೈದ್ಯರಿಗೆ ಬಾಲಕಿ ಅಘಾತಕ್ಕೊಳಗಾಗಿರುವುದು ಕಂಡು ಬಂದಿದೆ. 
ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಬಾಲಕಿ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಈ ವೇಳೆ ಕುಟುಂಬಸ್ಥರು ಮಗಳೊಂದಿಗೆ ಮತ್ತೊಬ್ಬ ನೆರೆ ಮನೆಯ ಹುಡುಗಿ ಕೂಡ ಜೊತೆಗಿದ್ದಳು ಎಂದು ಹೇಳಿದ್ದಾರೆ. 
ಬಳಿಕ ಪೊಲೀಸರು ಆ ಬಾಲಕಿಯನ್ನು ವಿಚಾರಿಸಿದಾಗ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಹೇಳಿಕೆಯಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ, ಇಬ್ಬರ ಪೈಕಿ ಓರ್ವ ಕಾಮುಕನನ್ನು ಗಣೇಶ್ ನಿಕಾಮ್ (22) ಎಂದು ಗುರ್ತಿಸಲಾಗಿದೆ. 
ಕಾಮುಕರ ಅಟ್ಟಹಾಸಕ್ಕೊಳಗಾಗಿದ್ದ ಇಬ್ಬರು ಬಾಲಕಿಯರ ಪೈಕಿ ಓರ್ವ ಬಾಲಕಿ ಕೋಮಾ ಸ್ಥಿತಿಗೆ ಜಾರಿದ್ದು. ಇದೀಗ ಆ ಬಾಲಕಿ ಸಾವನ್ನಪ್ಪಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್