ಕೋಲ್ಕತ್ತಾ: 2016ರ ಸೆಪ್ಟೆಂಬರ್ 29 ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರು ಹಾಗೂ ಅವರ ಗುಡಾರಗಳನ್ನು ಧ್ವಂಸಗೈದು ಭಾರತೀಯ ಯೋಧರು ಪರಾಕ್ರಮ ಮೆರೆದಿದ್ದ ಆ ದಿನವನ್ನು ಸರ್ಜಿಕಲ್ ಸ್ಟ್ರೈಕ್ ದಿನವನ್ನಾಗಿ ಆಚರಿಸಲು ಮಮತಾ ಬ್ಯಾನರ್ಜಿ ಸರ್ಕಾರ ನಿರಾಕರಿಸಿದೆ.
ದೇಶದಲ್ಲಿನ ವಿಶ್ವವಿದ್ಯಾಲಯಗಳಿಗೆ ಸರ್ಜಿಕಲ್ ಸ್ಟ್ರೈಕ್ ದಿನವನ್ನು ಆಚರಿಸುವಂತೆ ನಿರ್ದೇಶನ ನೀಡಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಮಾತ್ರ ರಾಜ್ಯದಲ್ಲಿ ದಿನಾಚರಣೆಯನ್ನು ಆಚರಿಸಲು ನಿರಾಕರಿಸಿದೆ.
ಪಶ್ಚಿಮ ಬಂಗಾಳದಲ್ಲಿ ಸರ್ಜಿಕಲ್ ಸ್ಟ್ರೈಕ್ ದಿನಾಚರಣೆಯನ್ನು ಆಚರಿಸುವುದಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ರಾಜಕೀಯ ಮಾಡುತ್ತಿದೆ. ಚುನಾವಣೆಗೂ ಮುನ್ನ ದುರದ್ದೇಶದಿಂದ ಈ ಕೆಲಸ ಮಾಡುತ್ತಿದೆ ಎಂದು ಸಚಿವ ಪಾರ್ಥ ಚಟರ್ಜಿ ಹೇಳಿದ್ದಾರೆ.