ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಭಾರತದಲ್ಲಿ ಗೂಢಚಾರಿಕೆ ಶಂಕೆ: ಚೀನಾ ಮೂಲದ ವ್ಯಕ್ತಿ ಬಂಧನ

ಭಾರತದಲ್ಲಿ ಚೀನಾ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜಧಾನಿ ದೆಹಲಿಯಲ್ಲಿ ಚೀನಾ ಮೂಲದ ವ್ಯಕ್ತಿಯೋರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನವದೆಹಲಿ: ಭಾರತದಲ್ಲಿ ಚೀನಾ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜಧಾನಿ ದೆಹಲಿಯಲ್ಲಿ ಚೀನಾ ಮೂಲದ ವ್ಯಕ್ತಿಯೋರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಚಾರ್ಲಿಂ ಪೆಗ್ ಎಂಬ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಈತನಿಂದ ಭಾರತೀಯ ಪಾಸ್ ಪೋರ್ಟ್​, ಆಧಾರ್​ ಕಾರ್ಡ್​, 3.5 ಲಕ್ಷ ರೂ. ನಗದು, ಒಂದು ಎಸ್ ಯುವಿ ಕಾರು ಮತ್ತು ಮಹತ್ವದ ದಾಖಲೆಗಳು, 2000 ಅಮೆರಿಕನ್​ ಡಾಲರ್​ ಮತ್ತು 2000 ಥಾಯ್​ ಕರೆನ್ಸಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬಂಧಿತ ಚಾರ್ಲಿ ಪೆಂಗ್‍ನನ್ನು ಸೆಪ್ಟೆಂಬರ್ 13ರಂದು ದೆಹಲಿಯ ಮಂಜು ಕಾ ತಿಲ್ಲಾ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದರು. ಈತನನ್ನು ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಪೊಲೀಸರು ಹಾಜರುಪಡಿಸಿದ್ದರು. ಪ್ರಾಥಮಿಕ ಮಾಹಿತಿಗಳ ಅನ್ವಯ ಈತ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾನೆ ಎಂದು ತಿಳಿದು ಬಂದಿದೆ. ಹೀಗಾಗಿ ವಿಚಾರಣೆಗೆ ತಮ್ಮ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಿದ್ದರು. ಹೀಗಾಗಿ ಈತನನ್ನು ಇದೀಗ ಪೊಲೀಸರ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಚೀನಾದ ನಂಜಿಂಗ್​ ಪ್ರದೇಶಕ್ಕೆ ಸೇರಿದ ಈತ ತರಬೇತಿ ಪಡೆದ ನುರಿತ ಗೂಢಚಾರನಾಗಿದ್ದಾನೆ ಎನ್ನಲಾಗಿದೆ. 5 ವರ್ಷಗಳ ಹಿಂದೆ ಭಾರತಕ್ಕೆ ಬಂದು, ದೆಹಲಿಯಲ್ಲಿ ನೆಲೆಸಿದ್ದ. ಅಲ್ಲದೆ ಈತ ಪದೇಪದೆ ಹಿಮಾಚಲ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದ. ಮಾತ್ರವಲ್ಲ ಈತ ಭಾರತೀಯ ಯುವತಿಯನ್ನು ವಿವಾಹವಾಗಿ, ಮಣಿಪುರದ ವಿಳಾಸದ ಆಧಾರದ ಮೇಲೆ ಪಾಸ್ ಪೋರ್ಟ್​ ಪಡೆದಿದ್ದ. ಜೊತೆಗೆ ವಿದೇಶಿ ಕರೆನ್ಸಿ ವಿನಿಮಯ ಕಚೇರಿ ಹೊಂದಿದ್ದ. ಹವಾಲಾ ದಂಧೆಯಲ್ಲೂ ಭಾಗಿಯಾಗಿದ್ದ ಎಂಬ ಶಂಕೆ ಇದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮಣಿಪುರದಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಭಾರತದಲ್ಲಿ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಚೀನಾದ 55 ವರ್ಷದ ಕಿನ್ ಮಿನ್ ಕ್ಸಿವ್ ಕ್ಸಿಯಾಂಗ್ ಎಂಬವನನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್