ಫ್ರಾಂಕೋಯಿಸ್‌ ಹೊಲಾಂಡ್‌ 
ದೇಶ

ರಾಫೆಲ್ ಡೀಲ್ ಗೆ ಅನಿಲ್ ಅಂಬಾನಿಯನ್ನು ಆಯ್ಕೆ ಮಾಡಿದ್ದು ಭಾರತ: ಫ್ರಾನ್ಸ್ ಮಾಜಿ ಅಧ್ಯಕ್ಷ

ರಾಫೆಲ್ ವಿವಾದಕ್ಕೆ ತುಪ್ಪ ಸುರಿದಿರುವ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲಾಂಡ್‌ ಅವರು, ರಾಫೆಲ್ ಯುದ್ಧ...

ನವದೆಹಲಿ: ರಾಫೆಲ್ ವಿವಾದಕ್ಕೆ ತುಪ್ಪ ಸುರಿದಿರುವ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲಾಂಡ್‌ ಅವರು, ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಭಾರತ ಅನಿಲ್ ಅಂಬಾನಿ ನೇತೃತ್ವದ ರಿಲಾಯನ್ಸ್ ಢಿಫೆನ್ಸ್ ಅನ್ನು ಆಯ್ಕೆ ಮಾಡಿತು. ಆದರೆ ಡಸ್ಸಾಲ್ಟ್ ಏವಿಯೇಷನ್ ಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.
ಮೀಡಿಯಾಪಾರ್ಟ್ ಗೆ ನೀಡಿದ ಸಂದರ್ಶನದಲ್ಲಿ ಪಾಲುದಾರನಾಗಿ ರಿಲಯನ್ಸ್ ಅನ್ನು ಆಯ್ಕೆ ಮಾಡಿದವರು ಯಾರು? ಎಂಬ ಪ್ರಶ್ನೆಗೆ ಉತ್ತರಿಸಿದ ಫ್ರಾನ್ಸ್ ಮಾಜಿ ಅಧ್ಯಕ್ಷ್ಯರು, ರಿಲಾಯನ್ಸ್ ಹೆಸರನ್ನು ಪ್ರಸ್ತಾಪಿಸಿದ್ದು ಭಾರತ ಮತ್ತು ಡಸಾಲ್ಟ್ ಗೆ ಬೇರೆ ಆಯ್ಕೆ ಇರಲಿಲ್ಲ. ಹೀಗಾಗಿ ಆ ಕಂಪನಿಯನ್ನು ಪಾಲುದಾರಿಕೆಯನ್ನು ಒಪ್ಪಿಕೊಳ್ಳಲಾಯಿತು ಎಂದಿದ್ದಾರೆ.
ಹೊಲಾಂಡ್ ಅವರ ಈ ಹೇಳಿಕೆ ಭಾರತ ಸರ್ಕಾರದ ಹೇಳಿಕೆಗೆ ಸಂಪೂರ್ಣ ತದ್ವಿರುದ್ಧವಾಗಿದ್ದು, ರಿಲಾಯನ್ಸ್ ಮತ್ತು ಡಸಾಲ್ಟ್ ನಡುವಿನ ವಾಣಿಜ್ಯ ಒಪ್ಪಂದವಾಗಿದ್ದು, ಅದರಲ್ಲಿ ಸರ್ಕಾರದ ಪಾತ್ರವಿಲ್ಲ ಮತ್ತು ರಿಲಾಯನ್ಸ್ ಢಿಫೆನ್ಸ್ ಆಯ್ಕೆ ಮಾಡುವುದು ಸಂಪೂರ್ಣ ಡಸಾಲ್ಟ್ ಏವಿಯೇಷನ್ ನಿರ್ಧಾರವಾಗಿತ್ತು ಎಂದು ಕೇಂದ್ರ ಸರ್ಕಾರ ಹೇಳಿತ್ತು.
ಇನ್ನು ಹೊಲಾಂಡ್ ಸಂದರ್ಶನದ ಬಗ್ಗೆ ತಕ್ಷಣ ಟ್ವೀಟ್ ಮಾಡಿರುವ ರಕ್ಷಣಾ ಸಚಿವಾಲಯದ ವಕ್ತಾರರು, ಫ್ರಾನ್ಸ್ ಮಾಜಿ ಅಧ್ಯಕ್ಷ ಹೊಲಾಂಡ್ ಅವರ ಹೇಳಿಕೆಯನ್ನು ಪರಿಶೀಲಿಸಲಾಗುವುದು. ವಾಣಿಜ್ಯ ಒಪ್ಪಂದದ ಬಗ್ಗೆ ಫ್ರಾನ್ಸ್ ಸರ್ಕಾರವಾಗಲಿ ಅಥವಾ ಭಾರತ ಸರ್ಕಾರವಾಗಲಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
2015ರ ಏಪ್ರಿಲ್ ನಲ್ಲಿ 36 ರಾಫೆಲ್ ಯುದ್ಧ ವಿಮಾನ ಖರೀದಿಗಾಗಿ ಭಾರತ ಮತ್ತು ಫ್ರಾನ್ಸ್ ನಡುವೆ ಅಂತರ್ ಸರ್ಕಾರಿ ಒಪ್ಪಂದ ನಡೆದಾಗ ಫ್ರಾಂಕೋಯಿಸ್‌ ಹೊಲಾಂಡ್‌ ಅವರು ಫ್ರಾನ್ಸ್ ಅಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel