ಒಡಿಶಾದಲ್ಲಿ ಡೇ ಸೈಕ್ಲೋನ್ ಹಾವಳಿ 
ದೇಶ

ಒಡಿಶಾಗೆ ಅಪ್ಪಳಿಸಿದ 'ಡೇ' ಚಂಡಮಾರುತ: ಭಾರಿ ಮಳೆ, ಪ್ರವಾಹ ಪರಿಸ್ಥಿತಿ ಸೃಷ್ಟಿ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಪರಿಣಾಮ ಸೃಷ್ಟಿಯಾಗಿರುವ ಡೇ ಚಂಡಮಾರುತ ಶುಕ್ರವಾರ ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ರಾಜ್ಯದಲ್ಲಿ ಭಾರಿ ಗಾಳಿ ಸಮೇತ ಭರ್ಜರಿ ಮಳೆಯಾಗುತ್ತಿದೆ.

ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಪರಿಣಾಮ ಸೃಷ್ಟಿಯಾಗಿರುವ ಡೇ ಚಂಡಮಾರುತ ಶುಕ್ರವಾರ ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ರಾಜ್ಯದಲ್ಲಿ ಭಾರಿ ಗಾಳಿ ಸಮೇತ ಭರ್ಜರಿ ಮಳೆಯಾಗುತ್ತಿದೆ.
ಪರಿಣಾಮ ಇದೀಗ ಒಡಿಶಾದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಒಡಿಶಾದ ಎಲ್ಲ ಐದು ಕರಾವಳಿ ಜಿಲ್ಲೆಗಳಾದ ಗಂಜಮ್, ಗಜಪತಿ, ಪುರಿ, ನಯಾಘರ್ ಮತ್ತು ಕುಂದ್ರಾ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಗುರುವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಪೂರ್ವ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತ ಕಳೆದ ಆರು ಗಂಟೆಗಳಿಂದ ಸುಮಾರು 15 ಕಿ.ಮೀ.ವೇಗದಲ್ಲಿ ಬೀಸುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ಆಂಧ್ರಪ್ರದೇಶ ಹಾಗೂ ಒಡಿಶಾದ ಗೋಪಾಲಪುರ್ ತಲುಪಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಮುಂದಿನ 24 ಗಂಟೆಗಳ ಕಾಲ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ತೆಲಂಗಾಣ, ಪಶ್ಚಿಮ ಬಂಗಾಳ, ಜಾರ್ಖಂಡ್, ಚತ್ತೀಸ್ ಘಡ, ವಿದರ್ಭ, ರಾಯಲಸೀಮಾ, ಪೂರ್ವ ಮಧ್ಯಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಪೂರ್ವ ರಾಜಸ್ಥಾನದಲ್ಲಿ ಮಳೆಯಾಗಲಿದೆ. ಅದರಲ್ಲೂ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಪಶ್ಚಿಮ ಬಂಗಾಳದಲ್ಲಿ ಗುರುವಾರ ಸೈಕ್ಲೋನ್ ಹೊಡೆತ ತೀವ್ರವಾಗಿದ್ದ ಪರಿಣಾಮ ಅಲ್ಲಿನ ಜನ ಭೀತಿಗೊಳಗಾಗಿದ್ದಾರೆ. ದಕ್ಷಿಣ ಒಡಿಶಾ, ಉತ್ತರ ಆಂಧ್ರಪ್ರದೇಶ, ಕಾಳಿಂಗಪಟ್ಟಣ, ಪುರಿ, ಗೋಪಾಲಪುರದಲ್ಲಿಯೂ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೀಡುಬಿಟ್ಟ ರಕ್ಷಣಾ ಪಡೆಗಳು
ಕಾಲಹಂಡಿ, ರಾಯಗಡ, ಗಜಪತಿ, ಪುರಿ, ನಯಾಘರ್, ಕಂದಾಮಲ್ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀಡು ಬಿಟ್ಟಿದೆ. ಜೊತೆಗೆ 17 ಹಡಗುಗಳು, ಇನ್ನಿತರ ತುರ್ತು ಸಾಮಾಗ್ರಿಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ