ಮನ್ವೆಂದ್ರ ಸಿಂಗ್ 
ದೇಶ

ರಾಜಸ್ತಾನ ಚುನಾವಣೆ; ಬಿಜೆಪಿಗೆ ತೀವ್ರ ಹಿನ್ನಡೆ, ಪಕ್ಷ ತೊರೆದ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ!

ರಾಜಸ್ತಾನ ಚುನಾವಣೆಗೂ ಮುನ್ನ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು ಪಕ್ಷದ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ...

ಬರ್ಮೆರಾ(ರಾಜಸ್ತಾನ್): ರಾಜಸ್ತಾನ ಚುನಾವಣೆಗೂ ಮುನ್ನ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು ಪಕ್ಷದ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. 
ಬಿಜೆಪಿ ತೊರೆದಿರುವ ಮನ್ವೆಂದ್ರ ಸಿಂಗ್ ತಾವು ಕಮಲ ಹಿಡಿದು ದೊಡ್ಡ ತಪ್ಪು ಮಾಡಿದ್ದೇನೆ. ನನಗೆ ಗೌರವ ಕೊಡದ ಪಕ್ಷದಲ್ಲಿ ನಾನು ಇರಲಾರೆ ಎಂದು ರಾಜಸ್ತಾನದ ಬರ್ಮೆರಾದ ಸ್ವಾಭಿಮಾನ್ ರ್ಯಾಲಿಯಲ್ಲಿ ಶಾಸಕ ಮನ್ವೆಂದ್ರ ಸಿಂಗ್ ಹೇಳಿದ್ದಾರೆ. 
2014ರ ಲೋಕಸಭೆ ಚುನಾವಣೆಯಲ್ಲಿ ತಂದೆ ಜಸ್ವಂತ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿತ್ತು. ಅಂದಿನಿಂದ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದ ಮನ್ವೆಂದ್ರ ಸಿಂಗ್ ಇಂದು ಪಕ್ಷವನ್ನು ತೊರೆದಿದ್ದಾರೆ. 
ಜಸ್ವಂತ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕರೆ ಮಾಡಿ ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ತಪ್ಪಿದಕ್ಕೆ ನನಗೆ ಬೇಸರವಾಗಿದೆ ಎಂದು ಹೇಳಿದ್ದರು ಎಂದು ಮನ್ವೆಂದ್ರ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT