ಸಾಂದರ್ಭಿಕ ಚಿತ್ರ 
ದೇಶ

ರಾತ್ರಿ ಇಡೀ ಸೆಕ್ಸ್.., ಬೆಳಗ್ಗೆ ಮತ್ತೆ ಬಾ ಎಂದಿದ್ದಕ್ಕೆ ಚಾಕು ಇರಿದ ಸಲಿಂಗಕಾಮಿ

ಎರಡನೇ ಬಾರಿಗೆ ಸೆಕ್ಸ್ ಗೆ ಒತ್ತಾಯಿಸಿದ್ದಕ್ಕೆ ಪುರುಷ ಸಲಿಂಗಕಾಮಿಗೆ ವ್ಯಕ್ತಿಯೋರ್ವ ಚಾಕಿವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪುಣೆ: ಎರಡನೇ ಬಾರಿಗೆ ಸೆಕ್ಸ್ ಗೆ ಒತ್ತಾಯಿಸಿದ್ದಕ್ಕೆ ಪುರುಷ ಸಲಿಂಗಕಾಮಿಗೆ ವ್ಯಕ್ತಿಯೋರ್ವ ಚಾಕಿವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದ್ದು, 2ನೇ ಬಾರಿಗೆ ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣ ತನ್ನ ಸಂಗಾತಿಯನ್ನೇ ಕೊಲ್ಲಲು ಯತ್ನಿಸಿದ 23 ವಯಸ್ಸಿನ ಸಲಿಂಗಕಾಮಿಯನ್ನುಪುಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಐಪಿಸಿಯ ಸೆಕ್ಷನ್ 307 (ಕೊಲೆಯ ಯತ್ನ)ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪುಣೆ ಸಿಟಿ ಪೊಲೀಸರು ಹೇಳಿದ್ದಾರೆ.
ಏನಿದು ಘಟನೆ?
ಇಬ್ಬರು ಪುರುಷರು ಕಳೆದ ಎರಡು ವರ್ಷಗಳಿಂದ ದೈಹಿಕ ಸಂಬಂಧ ಹೊಂದಿದ್ದರು. ಮಂಗಳವಾರ ರಾತ್ರಿ ಆರೋಪಿ ತನ್ನ ಪಾರ್ಟ್ನರ್ ಮನೆಗೆ ಬಂದು ರಾತ್ರಿ ಇಡೀ ಇಬ್ಬರು ಲೈಂಗಿಕ ಸಂಬಂಧವನ್ನು ಹೊಂದಿದ್ದರು. ಮಾರನೆಯ ದಿನ ಬೆಳಗ್ಗೆ ಬರುವಂತೆ ತನ್ನ ಪಾರ್ಟರ್ ಕೇಳಿದಾಗ ಅದಕ್ಕೆ ಆತ ಒಪ್ಪಲಿಲ್ಲ. ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬಳಿಕ ಇಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಆರೋಪಿ ಕೋಪಗೊಂಡು ಹರಿತವಾದ ಆಯುಧದಿಂದ ತನ್ನ ಜೊತೆಗಾರನಿಗೆ ಚುಚ್ಚಿದ್ದಾನೆ ಎಂದು ಖಡಾಕ್ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಸದ್ಯಕ್ಕೆ ಹಲ್ಲೆಗೊಳಗಾದವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಪೊಲೀಸರು ಇಬ್ಬರು ಪುರುಷರ ಹೆಸರುಗಳನ್ನು ಬಹಿರಂಗಪಡಿಸಿಲ್ಲ. 
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಸಲಿಂಗಕಾಮ ಅಪರಾಧವಲ್ಲ ಎಂಬ ಮಹತ್ವ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!