ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಫೆಲ್ ಡೀಲ್ ನಲ್ಲಿ ನಮ್ಮ ಪಾತ್ರವಿಲ್ಲ: ಹೊಲಾಂಡ್ ಹೇಳಿಕೆಗೆ ಫ್ರಾನ್ಸ್ ಸರ್ಕಾರದ ಸ್ಪಷ್ಟನೆ

ಭಾರತದೊಂದಿಗಿನ ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟಪಡಿಸಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 22 Sept 2018, 12:34 pm
ಪ್ಯಾರಿಸ್: ಭಾರತದೊಂದಿಗಿನ ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟಪಡಿಸಿದೆ.
ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ಮಾಜಿ ಆಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ಅವರು ನೀಡಿದ್ದ ಹೇಳಿಕೆ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಫ್ರಾನ್ಸ್ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಮಾತನಾಡಿರುವ ಯೂರೋಪ್ ಮತ್ತು ವಿದೇಶಾಂಗ ಸಚಿವಾಲಯದ ವಕ್ತಾರರು ರಾಫೆಲ್ ಒಪ್ಪಂದದಲ್ಲಿ ಫ್ರಾನ್ಸ್ ಸರ್ಕಾರದ ಯಾವುದೇ ಪಾತ್ರವಿಲ್ಲ.
ಒಪ್ಪಂದವನ್ನು ಭಾರತದಲ್ಲಿ ಯಾವ ಸಂಸ್ಥೆಗೆ ನೀಡಬೇಕು ಎಂಬುದು ಭಾರತಕ್ಕೆ ಬಿಟ್ಟ ವಿಚಾರ. ಅಂತೆಯೇ ತನ್ನ ಉತ್ಪಾದನೆಗಾಗಿ ಯಾವ ಸಂಸ್ಥೆಯನ್ನು ಆಯ್ಕೆ ಮಾಡಬೇಕು ಎಂಬ ಸ್ವಾತಂತ್ರ್ಯ ಖಂಡಿತವಾಗಿಯೂ ಭಾರತಕ್ಕಿದೆ. ಇದರಲ್ಲಿ ಫ್ರಾನ್ಸ್ ಸರ್ಕಾರದ ಪಾತ್ರವಿಲ್ಲ. ತಮ್ಮ ಅವಶ್ಯಕತೆಗೆ ತಕ್ಕಂತೆ ಭಾರತ ಸರ್ಕಾರ ತನ್ನ ಸಹಭಾಗಿ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಂಡಿದೆ. ಈ ಬಗ್ಗೆ ಡಸಾಲ್ಟ್ ಎವಿಯೇಷನ್ ಸಂಸ್ಥೆ ಈಗಾಗಲೇ ಸಾಕಷ್ಟು ಭಾರತೀಯ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು. ಕಾನೂನಿನ ಅನ್ವಯವೇ ಇವು ಕಾರ್ಯ ನಿರ್ವಹಿಸುತ್ತಿವೆ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟ ಪಡಿಸಿದೆ.

Advertisement

Advertisement

ನಿನ್ನೆಯಷ್ಟೇ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರು, ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಭಾರತ ಅನಿಲ್ ಅಂಬಾನಿ ನೇತೃತ್ವದ ರಿಲಾಯನ್ಸ್ ಢಿಫೆನ್ಸ್ ಅನ್ನು ಆಯ್ಕೆ ಮಾಡಿತು. ಆದರೆ ಡಸ್ಸಾಲ್ಟ್ ಏವಿಯೇಷನ್ ಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement