Has Rahul Gandhi formed ‘mahagathbandhan’ with Pakistan against PM Modi, asks Amit Shah
ನವದೆಹಲಿ: ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಫ್ರಾನ್ಸ್ ಮಾಜಿ ಅಧ್ಯಕ್ಷ ಹೋಲಾಂಡ್ ಅವರ ಹೇಳಿಕೆಯ ಬೆನ್ನಲ್ಲೇ ಮೋದಿ ವಿರುದ್ಧ ವಾಗ್ದಾಳಿ ತೀರ್ವಗೊಳಿಸಿರುವ ರಾಹುಲ್ ಗಾಂಧಿಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ.
"ಮೋದಿ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಪಾಕಿಸ್ತಾನದೊಂದಿಗೂ ಮಹಾಘಟಬಂಧನ ರಚಿಸಿದ್ದಾರಾ ಎಂದು ಕೇಳಿದ್ದಾರೆ. ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿದ್ದ ಪಾಕಿಸ್ತಾನ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ರಾಹುಲ್ ಗಾಂಧಿ ಆರೋಪಗಳನ್ನು ಉಲ್ಲೇಖಿಸಿ ಮೋದಿ ವಿರುದ್ಧ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ, ಪಾಕಿಸ್ತಾನ ಮೋದಿ ವಿರುದ್ಧ ಆಧಾರವಿಲ್ಲದ ಆರೋಪ ಮಾಡಲು ರಾಹುಲ್ ಗಾಂಧಿಯನ್ನು ಉಲ್ಲೇಖಿಸುತ್ತದೆ. ರಾಹುಲ್ ಗಾಂಧಿ ಮೋದಿ ಹಠಾವೋ ಎನ್ನುತ್ತಾರೆ, ಪಾಕಿಸ್ತಾನ ಸಹ ಮೋದಿ ಹಠಾವೋ ಎನ್ನುತ್ತಿದೆ, ರಾಹುಲ್ ಗಾಂಧಿ ಪಾಕಿಸ್ತಾನದೊಂದಿಗೂ ಮಹಾಘಟಬಂಧನ ರಚಿಸಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.