ಮನೋಹರ್ ಪರಿಕ್ಕರ್ ಗೋವಾ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ: ಅಮಿತ್ ಶಾ
ಗೋವಾ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಎಲ್ಲಾ ಗೊಂದಲಗಳಿಗೂ ಬಿಜೆಪಿ ತೆರೆ ಎಳೆದಿದ್ದು, ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.
ನವದೆಹಲಿ: ಗೋವಾ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಎಲ್ಲಾ ಗೊಂದಲಗಳಿಗೂ ಬಿಜೆಪಿ ತೆರೆ ಎಳೆದಿದ್ದು, ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.
ಗೋವಾಗೆ ಸಂಬಂಧಿಸಿದಂತೆ ಪಕ್ಷದ ಕೋರ್ ಕಮಿಟಿ ಸಭೆ ನಂತರ ಟ್ವೀಟ್ ಮೂಲಕ ಮಾಹಿತಿ ನೀಡಿರುವ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಅವರೇ ಮುಂದುವರೆಯಲಿದ್ದಾರೆ, ಸಧ್ಯದಲ್ಲೇ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಮನೋಹರ್ ಪರಿಕ್ಕರ್ ದೀರ್ಘಾವಧಿ ಅನಾರೋಗ್ಯ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂದಿತ್ತು. ಪರಿಸ್ಥಿತಿಯ ಲಾಭ ಪಡೆದು ಗೋವಾದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಸಹ ಸಾಕಷ್ಟು ಪ್ರಯತ್ನ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಇತ್ತೀಚೆಗಷ್ಟೇ ಗೋವಾ ಮಿತ್ರಪಕ್ಷಗಳೊಂದಿಗೆ ಮಾತುಕತೆ ನಡೆಸುವುದಕ್ಕಾಗಿ ಕೇಂದ್ರದ ನಾಯಕರನ್ನು ಗೋವಾಗೆ ಕಳಿಸಿದ್ದರು. ಆದರೆ ಈಗ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ಬಿಜೆಪಿ ಮನೋಹರ್ ಪರಿಕ್ಕರ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರೆಸಲು ತೀರ್ಮಾನಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.