ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಸವಾಲು ಹಾಕಿ ಸದ್ದು ಮಾಡಿದ್ದ ಫೈರ್ ಬ್ರಾಂಡ್ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ಈಗ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹಬ್ಬಿದೆ.
ಈ ಬಗ್ಗೆ ಸ್ವತಃ ಅಲ್ಪೇಶ್ ಠಾಕೂರ್ ಸ್ಪಷ್ಟನೆ ನೀಡಿದ್ದು, ಈ ರೀತಿಯ ವದಂತಿಗಳನ್ನು ಯಾರು ಹಬ್ಬಿಸುತ್ತಿದ್ದಾರೆ ನನಗೆ ತಿಳಿದಿಲ್ಲ. ಆದರೆ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ, ನಾನು ಕಾಂಗ್ರೆಸ್ ಜೊತೆಗಿದ್ದೇನೆ ಹಾಗೂ ಕಾಂಗ್ರೆಸ್ ಜೊತೆಯಲ್ಲೇ ಇರುತ್ತೇನೆ, ನಾನು 20,000 ಅನುಯಾಯಿಗಳ ಅಭಿಪ್ರಾಯ ಪಡೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೆ. ಬಿಹಾರವೂ ಸೇರಿದಂತೆ ನಾನು ರಾಷ್ಟ್ರೀಯ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ಅಲ್ಪೇಶ್ ಠಾಕೂರ್ ಹೇಳಿದ್ದಾರೆ.
ವಿಜಯ್ ರುಪಾನಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯುವ ಮೂಲಕ ಅಲ್ಪೇಶ್ ಠಾಕೂರ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂಬ ವದಂತಿಗಳು ಹರಡಿತ್ತು. ಈ ಹಿನ್ನೆಲೆಯಲ್ಲಿ ಅಲ್ಪೇಶ್ ಠಾಕೂರ್ ಸ್ಪಷ್ಟನೆ ನೀಡಿದ್ದಾರೆ.