ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಎನ್'ಕೌಂಟರ್ 2 ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಬಾರಾಮುಲ್ಲಾದ ತುಜ್ಝಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು. ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಕಾರ್ಯಾಚರಣೆ ಎನ್'ಕೌಂಟರ್ ಆಗಿ ಬದಲಾಗಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆದಿದೆ. ಇದರಂತೆ ಉಗ್ರರ ದಾಳಿಗೆ ದಿಟ್ಟ ಇತ್ತರ ನೀಡಿರುವ ಸೇನಾಪಡೆ ಇಬ್ಬರು ಉಗ್ರರನ್ನು ಸದೆಬಡಿದಿದೆ.
ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.