ಶಿಮ್ಲಾ: ಹಿಮದ ನಾಡು ಹಿಮಾಚಲ ಪ್ರದೇಶದಲ್ಲಿ ಭಾರಿ ಹಿಮಪಾತವಾಗಿದ್ದು, ಈ ವೇಳೆ ಟ್ರೆಕಿಂಗ್ ಗೆ ತೆರಳಿದ್ದ ಸುಮಾರು 45 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಿಮಾಚಲ ಪ್ರದೇಶದ ಲಹೌಲ್ ಮತ್ತುಸ್ಪಿಟಿ ಪ್ರದೇಶದಲ್ಲಿ ಸಂಭವಿಸಿದ್ದು, ರೂರ್ಕಿಯ 35 ಐಐಟಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 45 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ವಿದ್ಯಾರ್ಥಿಗಳೆಲ್ಲರೂ ಹಿಮಾಚಲ ಪ್ರದೇಶದ ಹಮ್ಜ್ಟಾ ಪಾಸ್ ಗೆ ಟ್ರೆಕಿಂಗ್ ಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಎಲ್ಲರೂ ಹಿಮಪಾತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ವಿದ್ಯಾರ್ಥಿಗಳ ನಾಪತ್ತೆ ಪ್ರಕರಣವನ್ನು ಹಿಮಾಚಲ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಧಿಕಾರಿಗಳಿಗೆ ಸೂಟಿಸಿದೆ. ಅಂತೆಯೇ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಸೇನಾಧಿಕಾರಿಗಳಿಗೂ ಮನವಿ ಮಾಡಿದೆ.
ಇನ್ನು ಕಳೆದೊಂದು ವಾರದಲ್ಲಿ ಹಿಮಾಚಲ ಪ್ರದೇಶದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಈ ವರೆಗೂ ವಿವಿಧ ಪ್ರದೇಶಗಳಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಕುಲ್ಲು, ಕಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಹಿಮಪಾತದ ಪ್ರಮಾಣ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.